ಮನೆ ಸುದ್ದಿ ಜಾಲ RCB ವಿಜಯಕ್ಕೆ ಆಸ್ಟ್ರೇಲಿಯಾ ಉಪಪ್ರಧಾನಿಯ ಪ್ರಶಂಸೆ; ವಿರಾಟ್ ಕೊಹ್ಲಿ, ಹೇಜಲ್ವುಡ್, ಟಿಮ್ ಡೇವಿಡ್ ಪ್ರದರ್ಶನಕ್ಕೆ ಮೆಚ್ಚುಗೆ

RCB ವಿಜಯಕ್ಕೆ ಆಸ್ಟ್ರೇಲಿಯಾ ಉಪಪ್ರಧಾನಿಯ ಪ್ರಶಂಸೆ; ವಿರಾಟ್ ಕೊಹ್ಲಿ, ಹೇಜಲ್ವುಡ್, ಟಿಮ್ ಡೇವಿಡ್ ಪ್ರದರ್ಶನಕ್ಕೆ ಮೆಚ್ಚುಗೆ

0

ನವದೆಹಲಿ:ಐಪಿಎಲ್ 2026 ಟೂರ್ನಿಯ ಫೈನಲ್ ನಲ್ಲಿ ಭರ್ಜರಿಯಾಗಿ ಗೆದ್ದು ಸತತ 2ನೇ ಬಾರಿಗೆ ಪ್ರಶಸ್ತಿಗೆ ಮುತ್ತಿಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಾಧನೆಗೆ ಆಸ್ಟ್ರೇಲಿಯಾದ ಉಪ ಪ್ರಧಾನಿ ಮೆಚ್ಚುಗೆ ಸೂಚಿಸಿದ್ದಾರೆ.

ಆಸ್ಟ್ರೇಲಿಯಾದ ಉಪ ಪ್ರಧಾನಿ ಹಾಗೂ ರಕ್ಷಣಾ ಸಚಿವ ರಿಚರ್ಡ್ ಮಾರ್ಲೆಸ್ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ 2026 ಪ್ರಶಸ್ತಿ ಗೆಲುವನ್ನು ಶ್ಲಾಘಿಸಿದ್ದಾರೆ. ಇದು ಭಾರತ-ಆಸ್ಟ್ರೇಲಿಯಾ ನಡುವಿನ ಬಲವಾದ ಸಂಬಂಧದ ಪ್ರತೀಕವಾಗಿದೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, RCB ತಂಡದ ಗೆಲುವಿನಲ್ಲಿ ವಿರಾಟ್ ಕೊಹ್ಲಿ , ಜೋಶ್ ಹೇಜಲ್ವುಡ್ ಮತ್ತು ಟಿಮ್ ಡೇವಿಡ್ ಅವರ ಮಹತ್ವದ ಪಾತ್ರವನ್ನು ವಿಶೇಷವಾಗಿ ಉಲ್ಲೇಖಿಸಿದ್ದಾರೆ.

ಕಳೆದ ವರ್ಷ ನೋಡಿದಂತೆಯೇ ನಿನ್ನೆ ರಾತ್ರಿ RCB ಮತ್ತೊಮ್ಮೆ ಚಾಂಪಿಯನ್ ಆಗುವುದನ್ನು ನಾವು ಕಂಡೆವು ಎಂದು ಅವರು ಹೇಳಿದ್ದಾರೆ. ವಿರಾಟ್ ಕೊಹ್ಲಿ 75 ರನ್ ಗಳಿಸಿ ಅಜೇಯರಾಗಿದ್ದು ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ. ಅವರ ಜೊತೆಗೆ ಜೋಶ್ ಹೇಜಲ್ವುಡ್ ಮತ್ತು ಟಿಮ್ ಡೇವಿಡ್ ಕೂಡ ಉತ್ತಮ ಪ್ರದರ್ಶನ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಹೀಗಾಗಿ RCB ಯ ಗೆಲುವಿನಲ್ಲಿ ಭಾರತ-ಆಸ್ಟ್ರೇಲಿಯಾ ಸ್ನೇಹದ ಸ್ಪಷ್ಟ ಚಿತ್ರಣ ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ. ಇದು ಎರಡು ದೇಶಗಳ ನಡುವಿನ ಸಂಬಂಧವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಅವರು ವಿರಾಟ್ ಕೊಹ್ಲಿಯ ಜನಪ್ರಿಯತೆಯ ಕುರಿತು ಮಾತನಾಡಿದ್ದು, ಪ್ರಸ್ತುತ ಆಸ್ಟ್ರೇಲಿಯಾದಲ್ಲಿ ವಿರಾಟ್ ಕೊಹ್ಲಿ ಅತ್ಯಂತ ದೊಡ್ಡ ಹೆಸರಾಗಿದ್ದಾರೆ ಎಂದು ಹೇಳಿದ್ದಾರೆ.

ಕ್ರಿಕೆಟ್ ಭಾರತ ಮತ್ತು ಆಸ್ಟ್ರೇಲಿಯಾವನ್ನು ಒಗ್ಗೂಡಿಸುವ ಪ್ರಮುಖ ಸೇತುವೆಯಾಗಿದ್ದು, ಎರಡು ರಾಷ್ಟ್ರಗಳ ನಡುವಿನ ಸ್ನೇಹ ಮತ್ತು ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.