Saval
ಫೆ.16ರಂದು ಗ್ರಾಮೀಣ ಭಾರತ ಬಂದ್ ಗೆ ಕರೆ ನೀಡಿದ ಸಂಯುಕ್ತ ಕಿಸಾನ್ ಮೋರ್ಚಾ
ದೆಹಲಿ: ಹಲವು ಬೇಡಿಕೆಗಳ ಈಡೇರಿಕೆಗಾಗಿ ದೆಹಲಿ ಚಲೋ ಚಳವಳಿಯನ್ನು ಹಮ್ಮಿಕೊಂಡಿದ್ದ ಸಂಯುಕ್ತ ಕಿಸಾನ್ ಮೋರ್ಚಾ ಇದೀಗ ಫೆಬ್ರವರಿ 16ರಂದು ಗ್ರಾಮೀಣ ಭಾರತ ಬಂದ್ ಗೆ ಕರೆ ನೀಡಿದೆ.
ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಬ್ಯಾನರ್...
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ನಾಮನಿರ್ದೇಶನ ಬಯಸಿ ನಾಮಪತ್ರ ಸಲ್ಲಿಕೆ
ಜೈಪುರ (ರಾಜಸ್ಥಾನ): ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ನಾಮನಿರ್ದೇಶನ ಬಯಸಿ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ...
ಆಸ್ತಿ ತೆರಿಗೆ ಬಾಕಿ: ರಾಕ್ ಲೈನ್ ವೆಂಕಟೇಶ್ ಒಡೆತನದ ರಾಕ್ ಲೈನ್ ಮಾಲ್ ಗೆ...
ಬೆಂಗಳೂರು: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ದೊಡ್ಡ ದೊಡ್ಡ ವಾಣಿಜ್ಯ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಂದು (ಫೆ.14) ತೆರಿಗೆ ಬಾಕಿ ಉಳಿಸಿಕೊಂಡಿರುವ ರಾಕ್ ಲೈನ್ ಮಾಲ್...
ಚಿಂಚೋಳಿ: ನೇಣು ಹಾಕಿಕೊಂಡು ತಾಯಿ-ಮಗಳು ಆತ್ಮಹತ್ಯೆ
ಚಿಂಚೋಳಿ: ತಾಯಿ ಹಾಗೂ ಮಗಳು ನೇಣು ಹಾಕಿಕೊಂಡು ಸಾವನಪ್ಪಿದ ಘಟನೆ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ಫೆ. 13ರ ಮಂಗಳವಾರ ಸಂಜೆ ಸುಮಾರು 5 ಗಂಟೆಗೆ ನಡೆದಿದೆ.
ತಾಯಿ ಶಿವಲೀಲಾ ಆನಂದ(24) ಹಾಗೂ ಮಗಳು ವರ್ಷಿತಾ(2)...
ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ: ಮಾಜಿ ಕಾರ್ಪೊರೇಟರ್ ವಿರುದ್ಧ ದೂರು ದಾಖಲು
ಬೆಂಗಳೂರು: ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.
ಮಂಗಳವಾರ ರಾತ್ರಿ 11 ಗಂಟೆಗೆ ಗೋಪಾಲಯ್ಯಗೆ ಕರೆ...
ಸಹಾಯಕ ಸಬ್ ಇನ್ಸ್ ಪೆಕ್ಟರ್ ನೇಮಕಾತಿ: 820 ಖಾಲಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಸಹಾಯಕ ಸಬ್ ಇನ್ಸ್ ಪೆಕ್ಟರ್ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಒಟ್ಟು 820 ಖಾಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕಾನ್...
ಮಂಡ್ಯ ಜೆಡಿಎಸ್ ನಾಯಕರ ಜತೆ ಮಹತ್ವದ ಚರ್ಚೆ: ಮಂಡ್ಯ ಅಭ್ಯರ್ಥಿ ಆಯ್ಕೆ ಅಧಿಕಾರ ಹೆಚ್.ಡಿ.ಕುಮಾರಸ್ವಾಮಿಗೆ...
ಬೆಂಗಳೂರು: ಮಂಡ್ಯ ಲೋಕಸಭೆ ಚುನಾವಣೆ ಹಾಗೂ ಅಲ್ಲಿನ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಪಕ್ಷ ರಾಜ್ಯಾಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ನೀಡಲಾಗಿದೆ ಎಂದು ಮಾಜಿ...
ಎತ್ತಿನಹೊಳೆ ಯೋಜನೆ ಶೀಘ್ರ ಜಾರಿ: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭರವಸೆ
ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿರುವ ಎತ್ತಿನಹೊಳೆ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸಬೇಕೆಂದು ಕೋರಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ .ಜಯಚಂದ್ರ ಅವರು ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆ ಮೂಲಕ ಸರ್ಕಾರಕ್ಕೆ ಆಗ್ರಹಿಸಿದರು .
ಇದಕ್ಕೆ...
ನೀರಿನ ಮಿತ ಬಳಕೆ, ನೀರಿನ ಸದ್ಬಳಕೆ ಮಾಡಬೇಕು: ಡಾ. ಧನಂಜಯ ಬಿ.ಎನ್
ಮೈಸೂರು: ನೀರು ಬಹಳ ಅತ್ಯಮೂಲ್ಯವಾದ ವಸ್ತು, ಸಕಲ ಜೀವಿರಾಶಿಗಳಿಗೂ ಅವಶ್ಯಕವಾದದ್ದು, ಹಾಗಾಗಿ ನೀರಿನ ಮಿತ ಬಳಕೆ, ನೀರಿನ ಸದ್ಬಳಕೆ ಮಾಡುವುದು ಬಹಳ ಮುಖ್ಯ ಎಂದು ಉಪ ಕೃಷಿ ನಿರ್ದೇಶಕರಾದ ಡಾ. ಧನಂಜಯ ಬಿ.ಎನ್. ಅವರು ರೈತರಿಗೆ ಕರೆನೀಡಿದರು.
ನಾಗನಹಳ್ಳಿಯ ಕೃಷಿ ತರಬೇತಿ ಕೇಂದ್ರದಲ್ಲಿ ನಡೆದ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ “ತೆಂಗು ಮತ್ತು ಅಡಿಕೆ ಬೆಳೆಗಳಲ್ಲಿ ತಳಿ ಆಯ್ಕೆ, ಆಧುನಿಕ ಕೃಷಿ ಪದ್ದತಿಗಳು, ಸೂಕ್ಷ್ಮನೀರಾವರಿ ಮತ್ತು ರಸಾವರಿ ತಾಂತ್ರಿಕತೆಗಳ ಅಳವಡಿಕೆ ಮೂಲಕ ಅಧಿಕ ಲಾಭ” ವಿಷಯ ಕುರಿತ ಮೂರು ದಿನಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಫಲವತ್ತಾದ ಮಣ್ಣು ಮತ್ತು ನೀರನ್ನು ನಮ್ಮ ಮುಂದಿನ ಪೀಳಿಗೆಗೆ ಬಿಟ್ಟುಹೋಗುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ, ವಾಡಿಕೆಗಿಂತ ಕಡಿಮೆ ಮಳೆ ಬಿದ್ದರೂ ಸಹ ಮಳೆ ನೀರಿನ ಸದ್ಬಳಕೆಯನ್ನು ಹನಿ/ತುಂತುರು ನೀರಾವರಿ ಮುಖಾಂತರ ಮಾಡಬಹುದಾಗಿದೆ ಎಂದು ಸಲಹೆ ನೀಡಿದರು.
ಇದು ಮೂರು ದಿನಗಳ ತರಬೇತಿ ಕಾರ್ಯಕ್ರಮವಾಗಿದ್ದು, ತೆಂಗು, ಅಡಿಕೆ ಮತ್ತು ಇನ್ನಿತರ ತೋಟಗಾರಿಕೆ ಬೆಳೆಗಳ ವೈಜ್ಞಾನಿಕ ಬೇಸಾಯ, ರೋಗ ಮತ್ತು ಕೀಟಗಳ ನಿಯಂತ್ರಣ, ಸೂಕ್ಷ ನೀರಾವರಿ ಮತ್ತು ರಸಾವರಿ ಪದ್ದತಿಗಳ ಅಳವಡಿಕೆ ಬಗ್ಗೆ ತಿಳಿಸಿಕೊಡಲಾಗುವುದು ಎಂದರು.
ಜೈನ್ ಇರಿಗೇಷನ್ ಸಿಸ್ಟಮ್‌ನ ತಾಂತ್ರಿಕ ಸಲಹೆಗಾರರಾದ ನಿರಂಜನ್ ರವರು ಮಾತನಾಡಿ ತೆಂಗು, ಅಡಿಕೆ ಮತ್ತು ಇತರೆ ತೋಟಗಾರಿಕೆ ಬೆಳೆಗಳಲ್ಲಿ ಹನಿ ನೀರಾವರಿ ಪದ್ಧತಿಗಳ ಅಳವಡಿಕೆ, ನಿರ್ವಹಣೆ, ಹನಿ ನೀರಾವರಿ ಹಾಗೂ ರಸಾವರಿ ಪದ್ದತಿಗಳ ಅಳವಡಿಕೆ ಬಗ್ಗೆ ತಿಳಿಸಿಕೊಟ್ಟರು.
ತರಬೇತಿಯಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳ 30 ಜನ ರೈತರು ಭಾಗವಹಿಸಿದ್ದರು.
ಪೊಲೀಸರ ಕ್ರಮ ಖಂಡಿಸಿ, ಕಲಾಪದಿಂದ ಹೊರಗುಳಿದ ವಕೀಲರು
ಶ್ರೀರಂಗಪಟ್ಟಣ: ರಾಮನಗರದಲ್ಲಿ ೪೦ ಕ್ಕೂ ಹೆಚ್ಚು ವಕೀಲರ ವಿರುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ಕ್ರಮವನ್ನು ಖಂಡಿಸಿ ಶ್ರೀರಂಗಪಟ್ಟಣ ವಕೀಲರು ನ್ಯಾಯಾಲಯ ಕಲಾಪದಿಂದ ಹೊರಗುಳಿದು ಆಕ್ರೋಶ ವ್ಯಕ್ತಪಡಿಸಿದರು.
ಶ್ರೀರಂಗಪಟ್ಟಣ ವಕೀಲರ ಸಂಘದ ಅಧ್ಯಕ್ಷ ಸತ್ಯನಾರಾಯಣ...




















