Saval
ಕರ್ನಾಟಕ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ದೇಶದಲ್ಲೇ ಮೂರನೇ ಸ್ಥಾನ
ಭೋಪಾಲ್: ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ದೇಶದಲ್ಲೇ ಮೂರನೇ ಸ್ಥಾನ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನು ಉತ್ತಮ ಸಾಧನೆ ಮಾಡುವುದಾಗಿ ಗಣಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಹೇಳಿದ್ದಾರೆ.
ಇಂದು...
ಮುಖ್ಯಮಂತ್ರಿಗಳ ಮೈಸೂರು ಜಿಲ್ಲಾ ಪ್ರವಾಸ
ಮೈಸೂರು: ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜನವರಿ 24 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ.
ಅoದು ಬೆಳಿಗ್ಗೆ 10 ಗಂಟೆಗೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದ ಭಾರತ್ ಮಾತಾ ಶಾಲಾ ಮುಂಭಾಗದ ಮೈದಾನದಲ್ಲಿ ಜಲಸಂಪನ್ಮೂಲ ಇಲಾಖೆ, ಕಾವೇರಿ ನೀರಾವರಿ ನಿಗಮ ನಿಯಮಿತ ವತಿಯಿಂದ ಆಯೋಜಿಸಿರುವ “ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳುಸೋಗೆ ಗ್ರಾಮದ ಹತ್ತಿರ ಕಾವೇರಿ ನದಿಯಿಂದ ನೀರೆತ್ತಿ 79 ಗ್ರಾಮಗಳಲ್ಲಿ ಬರುವ 150 ಕೆರೆಗಳು ಹಾಗೂ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಮಾಡುವರು ಮತ್ತು ಸಾರ್ವಜನಿಕ ಸಭೆ” ಯನ್ನು ನಡೆಸುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ತಿಳಿಸಿದ್ದಾರೆ.
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗೆ ವಸ್ತ್ರಸಂಹಿತೆ ಜಾರಿ
ಮೈಸೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ಡಿಎಆರ್) ಪುರುಷ ಮತ್ತು ತೃತೀಯ ಲಿಂಗ ಪುರುಷ)-3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಜ. 28 ರಂದು ಬೆಳಗ್ಗೆ 11 ಯಿಂದ ಮದ್ಯಾಹ್ನ 12.30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುತ್ತಿದೆ.
ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ ಗಳನ್ನು ಧರಿಸುವುದು. ಜಿಪ್ ಪ್ಯಾಕೆಟ್‌ಗಳು ದೊಡ್ಡ ಬಟನ್‌ಗಳು ಇರುವ ಶರ್ಟ್ ಗಳನ್ನು ಧರಿಸತಕ್ಕದ್ದಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳನ್ನು ಧರಿಸತಕ್ಕದ್ದಲ್ಲ. ಪರೀಕ್ಷಾ ಕೇಂದ್ರದೊಳಗೆ ಷ್ಯೂಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂನ್ 14 ರಂದು ʼಎಮರ್ಜೆನ್ಸಿʼ ಸಿನಿಮಾ ರಿಲೀಸ್
ಮುಂಬಯಿ: ನಟಿ ಕಂಗನಾ ರಣಾವತ್ ನಟಿಸಿ, ನಿರ್ದೇಶಿಸಿರುವ ಬಹು ನಿರೀಕ್ಷಿತ ʼಎಮರ್ಜೆನ್ಸಿʼ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ.
ಭಾರತದ ತುರ್ತು ಪರಿಸ್ಥಿತಿಯ ಕಥೆಯನ್ನೊಳಗೊಂಡಿರುವ ʼಎಮರ್ಜೆನ್ಸಿʼ ಸಿನಿಮಾದಲ್ಲಿ ನಟಿ ಕಂಗನಾ ಭಾರತದ ಮೊದಲ ಮಹಿಳಾ...
ವರ್ಗಾವಣೆ ದಂಧೆ ಆರೋಪ: ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೆ ವರ್ಗಾವಣೆ ದಂಧೆ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಬಕಾರಿ ಖಾತೆ ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಲಾಗಿದೆ.
ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ...
ಶ್ರೀರಾಮ ಏನು ಬಿಜೆಪಿಯವರ ಅಪ್ಪನ ಮನೆ ಆಸ್ತಿಯಾ: ಡಿ.ಕೆ ಶಿವಕುಮಾರ್ ವಾಗ್ದಾಳಿ
ಬೆಂಗಳೂರು: ಭಗವಾನ್ ಶ್ರೀರಾಮ ಏನು ಬಿಜೆಪಿಯವರ ಅಪ್ಪನ ಮನೆ ಆಸ್ತಿಯಾ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ರಾಮ ಇದ್ದಾನೆ....
ಪುತ್ರ ವ್ಯಾಮೋಹದಿಂದಾಗಿ ಮೋದಿ ಜಪ ಮಾಡುತ್ತಿರುವ ದೇವೇಗೌಡರು: ಎಂ.ವೀರಪ್ಪ ಮೊಯ್ಲಿ
ಚಿಕ್ಕಬಳ್ಳಾಪುರ: ಕುಮಾರಸ್ವಾಮಿರನ್ನು ಕೇಂದ್ರದಲ್ಲಿ ಮಂತ್ರಿ ಮಾಡಬೇಕೆಂಬ ಪುತ್ರ ವ್ಯಾಮೋಹದಿಂದ ದೇವೇಗೌಡರು ಮೋದಿ ಜಪ ಮಾಡುತ್ತಿದ್ದಾರೆಂದು ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಟೀಕಿಸಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಮಂಗಳವಾರ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ದೇವೇಗೌಡರು ಈ...
ವಿಜಯಪುರ: ವೈರ್ ಲೆಸ್ ವಿಭಾಗದಲ್ಲಿ ಸೇವೆಯಲ್ಲಿದ್ದ ಪಿಎಸ್ ಐ ಸಾವು
ವಿಜಯಪುರ: ಪೊಲೀಸ್ ಇಲಾಖೆಯ ವಿಜಯಪುರ ಜಿಲ್ಲೆಯಲ್ಲಿ ವೈರ್ ಲೆಸ್ ವಿಭಾಗದಲ್ಲಿ ಸೇವೆಯಲ್ಲಿದ್ದ ಪಿಎಸ್ಐ ಒಬ್ಬರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ವೈರ್ ಲೆಸ್ ವಿಭಾಗದ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಶಂಕರಗೌಡ ಸಾರವಾಡ (28) ಮೃತರು.
ನರರೋಗ ಸಮಸ್ಯೆಯಿಂದ ಬಳಲುತ್ತಿದ್ದ...
ಮೈಸೂರು ಫೆಸ್ಟ್: ಸ್ಥಳದಲ್ಲೇ ಚಿತ್ರ ಬಿಡಿಸಿ ಬೈಸಿಕಲ್ ಗೆಲ್ಲಿ
ಮೈಸೂರು: ಮೈಸೂರು ಫೆಸ್ಟ್ ಕಾರ್ಯಕ್ರಮದ ಪ್ರಯುಕ್ತ “ನಮ್ಮ ಪರಂಪರೆ, ನಿಮ್ಮ ತಾಣ” (“our heritage, your destination) ಮೈಸೂರು ಪ್ರವಾಸೋದ್ಯಮವನ್ನು ಪ್ರತಿಬಿಂಬಿಸುವ ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮವನ್ನು ಪ್ರವಾಸೋದ್ಯಮ ಇಲಾಖೆಯಿಂದ ಜ. 27 ರಂದು...
ಮುಂಬೈ: ದೋಣಿ ಮಗುಚಿ ಓರ್ವ ಮಹಿಳೆ ಸಾವು: ಐವರು ನಾಪತ್ತೆ
ಮುಂಬೈ: ದೋಣಿಯೊಂದು ಮಗುಚಿ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿ, ಐದು ಮಂದಿ ನಾಪತ್ತೆಯಾದ ಘಟನೆ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಚಮೋರ್ಶಿ ಪೊಲೀಸರ ಪ್ರಕಾರ, ಮೆಣಸಿನಕಾಯಿ ಕತ್ತರಿಸಲು ಏಳು ಮಹಿಳೆಯರು ಚಮೋರ್ಶಿಯ ಘನಪುರ...





















