Saval
ವಿದ್ಯುತ್ ಬಿಲ್ ವಿಚಾರವಾಗಿ ನಡೆದ ಜಗಳದಲ್ಲಿ ಮಹಿಳಾ ಟೆಕ್ನಿಷಿಯನ್ ಹತ್ಯೆ
ಮಹಾರಾಷ್ಟ್ರ: ವಿದ್ಯುತ್ ಬಿಲ್ ವಿಚಾರಕ್ಕೆ ವ್ಯಕ್ತಿಯೊಬ್ಬ ಮಹಾರಾಷ್ಟ್ರ ಸ್ಟೇಟ್ ಎಲೆಕ್ಟ್ರಿಸಿಟಿ ಡಿಸ್ಟ್ರಿಬ್ಯೂಷನ್ ಕಂ ಲಿಮಿಟೆಡ್ ನ ಮಹಿಳಾ ಟೆಕ್ನಿಷಿಯನ್ ನ ಹತ್ಯೆ ಮಾಡಿದ್ದಾರೆ.
ಟೆಕ್ನಿಷಿಯನ್ 570 ರೂಪಾಯಿಯ ಹೆಚ್ಚಿನ ವಿದ್ಯುತ್ ಬಿಲ್ ನೀಡಿದ್ದಾರೆ ಎಂದು...
ಲಿಂಗಸುಗೂರು: 500 ಮುಖ ಬೆಲೆಯ ಝರಾಕ್ಸ್ ನೋಟಿನ 62 ಬಂಡಲ್ ಜಪ್ತಿ
ಲಿಂಗಸುಗೂರು (ರಾಯಚೂರು ಜಿಲ್ಲೆ): ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ದೂರಿನ ಹಿನ್ನೆಲೆಯಲ್ಲಿ ಅಬಕಾರಿ ಅಧಿಕಾರಿಗಳು ಪಟ್ಟಣದ ಮನೆಯೊಂದರ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ₹ 500 ಮುಖ ಬೆಲೆಯ ನೋಟಿನ 62 ಬಂಡಲ್...
ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ
ದೆಹಲಿ: ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಏಪ್ರಿಲ್ 19 ರಿಂದ ಪ್ರಾರಂಭವಾಗಿದೆ, ಆದ್ದರಿಂದ ಶುಕ್ರವಾರ (ಏಪ್ರಿಲ್ 26) ಅಂದರೆ ಇಂದು ಎರಡನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ದೇಶಾದ್ಯಂತ 13 ರಾಜ್ಯಗಳ 89...
ಮೈಸೂರು ಅನಂತಸ್ವಾಮಿ ಧಾಟಿಯಲ್ಲಿ ನಾಡಗೀತೆ: ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ ನಾಡಗೀತೆ ಹಾಡುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ. ಸರ್ಕಾರದ ಆದೇಶ ಪ್ರಶ್ನಿಸಿ ಸುಗಮ ಸಂಗೀತ ಗಾಯಕ ಕಿಕ್ಕೇರಿ...
ಮಂಡ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಬೃಹತ್ ರೋಡ್ ಶೋ
ಮಂಡ್ಯ:ಮಂಡ್ಯ ನಗರದಲ್ಲಿ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಬುಧವಾರ ಜಾ.ದಳ-ಬಿಜೆಪಿ ಮೈತ್ರಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬೃಹತ್ ರೋಡ್ ಶೋ ನಡೆಸಿದರು.
ಮಂಡ್ಯದ ಮಂಡ್ಯ ವಿಶ್ವವಿದ್ಯಾಲಯದ ಎದುರಿನಿಂದ ರಾಜ್ಯ ಯುವ ಜಾ.ದಳ...
ಪಂಜಿನ ಮೆರವಣಿಗೆ ಮೂಲಕ ಕಡ್ಡಾಯ ಮತದಾನ ಜಾಗೃತಿ ಕಾರ್ಯಕ್ರಮ
ಮೈಸೂರು:ಲೋಕಸಭಾ ಚುನಾವಣೆ ಹಿನ್ನೆಲೆ ಏಪ್ರಿಲ್ 26ರಂದು ಮತಗಟ್ಟೆಗಳಿಗೆ ತೆರಳಿ ತಪ್ಪದೇ ತಮ್ಮ ಮತವನ್ನು ಚಲಾಯಿಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹುಣಸೂರು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಪಂಜಿನ ಮೆರವಣಿಗೆ ಜಾಥಾವನ್ನು ಆಯೋಜಿಸಲಾಗಿತ್ತು.
ಕಲ್ಕುಣಿಕೆ ವೃತ್ತದ ಬಳಿಯಿರುವ ರಾಘವೇಂದ್ರ ಸ್ವಾಮಿ ಮಠದ ಮುಂಭಾಗದಿoದ ಆಯೋಜಿಸಲಾಗಿದ್ದ ಪಂಜಿನ ಮೆರವಣಿಗೆ ಕಾರ್ಯಕ್ರಮಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕರಾದ ಶಿವಕುಮಾರ ಪಂಜಿಗೆ ಬೆಳಕು ಹತ್ತಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಮತದಾನದ ದಿನದಂದು ಯಾವುದೇ ರೀತಿಯ ಸಮಸ್ಯೆಗಳಾಗದಂತೆ ನೋಡಿಕೊಳ್ಳುವಂತೆ, ಗ್ರಾಮ ಪಂಚಾಯಿತಿಗಳಲ್ಲಿ ಶೇ. 100 ರಷ್ಟು ಮತದಾನವಾಗುವಂತೆ ಎಲ್ಲಾ ಅಧಿಕಾರಿಗಳು ಕ್ರಮ ವಹಿಸುವಂತೆ ಹಾಗೂ ಮತದಾರರನ್ನು ಮತಗಟ್ಟೆಗಳ ಕಡೆಗೆ ಕರೆತರಲು ಸೂಕ್ತ ವ್ಯವಸ್ಥೆ ಮಾಡುವಂತೆ ತಿಳಿಸಿದರು.
ಜಾಥಾದಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ, ಮರೆಯದಿರಿ ಏಪ್ರಿಲ್ 26ರಂದು ಮರೆಯದಿರಿ, ನಮ್ಮ ಮತ ನಮ್ಮ ಹಕ್ಕು ಹೀಗೆ ಸಾರ್ವಜನಿಕರು ಕಡ್ಡಾಯವಾಗಿ ಮತಗಟ್ಟೆಗಳಿಗೆ ತೆರಳಿ ಮತ ಚಲಾಯಿಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಎಲ್ಲೆಲ್ಲಿ ಮೆರವಣಿಗೆ: ಪಂಜಿನ ಮೆರವಣಿಗೆಯ ಕಾಲ್ನಡಿಗೆ ಜಾಥಾವು ರಾಘವೇಂದ್ರ ಸ್ವಾಮಿ ದೇವಸ್ಥಾನದಿಂದ ಹೊರಟು ಕೆಹೆಚ್ಬಿ ಕಾಲೋನಿ, ಮರೂರಮ್ಮ ಕಾಲೋನಿ ಮಾರ್ಗವಾಗಿ ಹಾರಂಗಿ ಕಛೇರಿ, ಉಪವಿಭಾಗಾಧಿಕಾರಿಗಳ ವಸತಿ ಗೃಹದ ರಸ್ತೆ, ಪೊಲೀಸ್ ವಸತಿ ಗೃಹ ಹಾಗೂ ಸದಾಶಿವಯ್ಯನ ಕೊಪ್ಪಲು ಮಾರ್ಗವಾಗಿ ಕಲ್ಕುಣಿಕೆ ವೃತ್ತದಲ್ಲಿ ಅಂತ್ಯಗೊoಡಿದ್ದು, ವಾರ್ಡ್ ನಂ 1 ರಿಂದ 9 ರಲ್ಲಿರುವ ಮತಗಟ್ಟೆ ಸಂಖ್ಯೆ 129 ರಿಂದ 141ರಲ್ಲಿನ ನಿವಾಸಿಗಳಿಗೆ ಮತದಾನದ ಕುರಿತು ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಯೋಜನಾಧಿಕಾರಿ ಎಂ.ಎಸ್.ರಾಜೇಶ್, ವ್ಯವಸ್ಥಾಪಕರಾದ ಮಹೇಶ್ ನಾಯಕ್, ಸಹಾಯಕ ನಿರ್ದೇಶಕರಾದ ಗಿರಿಧರ್, ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯಾದ ಚಂದ್ರಶೇಖರ್, ಲೋಕೇಶ್, ನಗರಸಭೆ ಸ್ವೀಪ್ ನೋಡಲ್ ಅಧಿಕಾರಿಯಾದ ಸೋಮಸುಂದರ್, ಶಶಿ, ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಕರವಸೂಲಿಗಾರರು, ಕಂಪ್ಯೂಟರ್ ಆಪರೇಟರ್‌ಗಳು, ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಬಿಜೆಪಿ ಸಾಮಾಜಿಕ ನ್ಯಾಯ, ಬಡವರ ಹಿತಕ್ಕೆ ವಿರುದ್ಧವಾಗಿರುವ ಪಕ್ಷ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೀದರ್, ಆಳಂದ: ಏಪ್ರಿಲ್ 24: ಬಿಜೆಪಿ ಆಡಳಿತದ ಅವಧಿಯಲ್ಲಿ ಸಂವಿಧಾನ ಅಪಾಯದಲ್ಲಿದ್ದು ಅದನ್ನು ರಕ್ಷಣೆ ಮಾಡಬೇಕಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲರೂ ಚಿಂತನೆ ನಡೆಸಬೇಕು. ದೇಶದ ಭವಿಷ್ಯ ರೂಪಿಸಲು ಇದು ಬಹಳ ಮುಖ್ಯ. ಜನತೆ...
ಜನಾಕರ್ಷಿಸಲಿವೆ ವಿಶೇಷ ಮತಗಟ್ಟೆಗಳು
ಮೈಸೂರು: ಯುವ, ಸಖಿ, ವಿಶೇಷಚೇತನ, ಮಾದರಿ ಹಾಗೂ ವಿಷಯದಾರಿತ ಮತಗಟ್ಟೆಗಳು ಈ ಬಾರಿ ವಿವಿಧ ರೀತಿಯಲ್ಲಿ ಮತದಾರರ ಕೈ ಬೀಸಿ ಕರೆಯಲಿವೆ.
ಜಿಲ್ಲಾ ಸ್ವೀಪ್ ಸಮಿತಿ ನೇತೃತ್ವದಲ್ಲಿ ಜಿಲ್ಲೆಯ 11 ಕ್ಷೇತ್ರಗಳಲ್ಲಿ 2915...
ಪ್ರಧಾನಿ ವಿರುದ್ಧದ ಷಡ್ಯಂತ್ರ ದೇಶದ್ರೋಹವಾಗಿದ್ದು ಬೇಜವಾಬ್ದಾರಿಯ ಆರೋಪ ಮಾಡಬಾರದು: ದೆಹಲಿ ಹೈಕೋರ್ಟ್
ಪ್ರಧಾನಮಂತ್ರಿ ವಿರುದ್ಧದ ಪಿತೂರಿ ದೇಶದ್ರೋಹಕ್ಕೆ ಸಮವಾಗಿದ್ದು ಇದು ಅತ್ಯಂತ ಗಂಭೀರ ಅಪರಾಧ ಎಂದು ದೆಹಲಿ ಹೈಕೋರ್ಟ್ ಬುಧವಾರ ಮೌಖಿಕವಾಗಿ ತಿಳಿಸಿದೆ.
ಪ್ರಧಾನಮಂತ್ರಿ ವಿರುದ್ಧ ಯಾರೋ ಪಿತೂರಿ ನಡೆಸಿದ್ದಾರೆ ಎಂಬುದಾಗಿ ಬೇಜವಾಬ್ದಾರಿಯ ಆರೋಪ ಮಾಡಲಾಗದು. ಅಂತಹ...
ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣಕ್ಕೆ ಮುಸ್ಲೀಮರ ಮೀಸಲಾತಿಗೆ ಬೆಂಬಲ ಕೊಡುತ್ತದೆ: ಬಸವರಾಜ ಬೊಮ್ಮಾಯಿ
ಗದಗ: ಧರ್ಮ ಆಧಾರಿತ ಮೀಸಲಾತಿಗೆ ಅವಕಾಶ ಇಲ್ಲ ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ಹೀಗಿದ್ದರೂ ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣಕ್ಕೆ ಮುಸ್ಲೀಮರ ಮೀಸಲಾತಿಗೆ ಬೆಂಬಲ ಕೊಡುತ್ತದೆ ಎಂದು ಮಾಜಿ ಸಿಎಂ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ...






















