Saval
ಗನಗನಸಖಿಯೊಂದಿಗೆ ಅಸಭ್ಯ ವರ್ತನೆ: ಪ್ರಯಾಣಿಕನ ಬಂಧನ
ಬೆಂಗಳೂರು: ವಿಮಾನದಲ್ಲಿ ಪ್ರಯಾಣಿಸುವ ವೇಳೆ ಗಗನಸಖಿಯ ಕೈ ಹಿಡಿದು ಅಸಭ್ಯವಾಗಿ ವರ್ತಿಸಿದ ಆರೋಪದಡಿ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ರಣಧೀರ್ ಸಿಂಗ್ (33) ಬಂಧಿತ.
ಈತ ನ.17ರಂದು...
ಮತ್ತೆ ಬಂಧನದ ಭೀತಿಯಲ್ಲಿ ಮುರುಘಾ ಶ್ರೀ
ಚಿತ್ರದುರ್ಗ: ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಚಿತ್ರದುರ್ಗದ ಮುರುಘಾಶ್ರೀಗೆ 2ನೇ ಪ್ರಕರಣ ಕಂಟಕವಾಗಿದೆ.
2ನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾ ಶರಣರ...
ಯತೀಂದ್ರ ಬಗ್ಗೆ ಟೀಕಿಸಲು ಕುಮಾರಸ್ವಾಮಿ ಬಳಿ ಸೂಕ್ತ ದಾಖಲೆಗಳು ಇವೆಯಾ?: ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಕೊಪ್ಪಳ: ಎಚ್.ಡಿ. ಕುಮಾರಸ್ವಾಮಿ ವಿದ್ಯುತ್ ಕದ್ದಿದ್ದಾರೆ. ದಂಡವನ್ನೂ ಕಟ್ಟಿದ್ದಾರೆ. ಅವರಿಗೆ ಇನ್ನೊಬ್ಬರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ಯತೀಂದ್ರ ಬಗ್ಗೆ ಟೀಕಿಸಲು ಕುಮಾರಸ್ವಾಮಿ ಬಳಿ ಸೂಕ್ತ ದಾಖಲೆಗಳು ಇವೆಯಾ? ಎಂದು ಮುಖ್ಯಮಂತ್ರಿ...
ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಪ್ರಚೋದನಾಕಾರಿ ಪೋಸ್ಟ್ ಕಂಡುಬಂದರೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಿ: ಜಿ.ಪರಮೇಶ್ವರ್
ಬೆಳಗಾವಿ: ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಸುಳ್ಳುಸುದ್ದಿಗಳು, ಪ್ರಚೋದನಾಕಾರಿ ಹೇಳಿಕೆ ಅಥವಾ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಆಗಿರುವುದು ಕಂಡುಬಂದರೆ ತಕ್ಷಣವೇ ಕಾರ್ಯಪ್ರವೃತ್ತರಾಗಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಗೃಹಸಚಿವ ಜಿ.ಪರಮೇಶ್ವರ್ ಪೊಲೀಸ್ ಅಧಿಕಾರಿಗಳಿಗೆ...
ವಿಜಯನಗರ: ಇನ್ನೆರಡು ದಿನದಲ್ಲಿ ಮದುವೆಯಾಗಬೇಕಿದ್ದ ಯುವತಿ ವರನ ಮನೆಯಲ್ಲೇ ಅನುಮಾನಾಸ್ಪದ ಸಾವು
ವಿಜಯನಗರ: ಇನ್ನೆರಡು ದಿನದಲ್ಲಿ ಮದುವೆಯಾಗಬೇಕಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂ ಬಳಿ ನಡೆದಿದೆ.
ಐಶ್ವರ್ಯ ಮೃತಪಟ್ಟ ಯುವತಿ.
ಕೇವಲ 2 ದಿನಗಳಲ್ಲಿ ಯುವತಿ ಅಂತರ್ಜಾತಿ ಯುವಕನನ್ನು ವಿವಾಹವಾಗಲು ...
ನೇಜಾರು ಕೊಲೆ ಪ್ರಕರಣ: ಪ್ರಚೋದನಾಕಾರಿ ಪೋಸ್ಟ್ ಹಂಚಿಕೊಂಡಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು
ಉಡುಪಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ ಪ್ರಕರಣ ಸಂಬಂಧ ಹಫೀಜ್ ಮೊಹಮ್ಮದ್ ಎಂಬಾತ ಫೇಸ್ ಬುಕ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್’ಗಳನ್ನು ಹಂಚಿಕೊಂಡಿದ್ದು, ಆತನ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ...
ಮಹಾರಾಷ್ಟ್ರದಲ್ಲಿ 3.5 ತೀವ್ರತೆಯ ಭೂಕಂಪ
ಮುಂಬೈ: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಇಂದು (ನ.20) ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ ಸಿಎಸ್) ಮಾಹಿತಿ ನೀಡಿದೆ.
ಯಾವುದೇ ಹಾನಿ ಬಗ್ಗೆ ತಕ್ಷಣದ ವರದಿಯಾಗಿಲ್ಲ. ಬೆಳಿಗ್ಗೆ...
ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಮೊದಲ ಆದ್ಯತೆ: ಬಿ ವೈ ವಿಜಯೇಂದ್ರ
ಮೈಸೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು...
ಮೈಸೂರು: ಕೈಗಾರಿಕೆಗೆ ಜಮೀನು ಪಡೆದು ಉದ್ಯೋಗ ನೀಡದ್ದಕ್ಕೆ ಯುವಕ ಆತ್ಮಹತ್ಯೆ
ಮೈಸೂರು: ಕೈಗಾರಿಕೆಗಾಗಿ ಜಮೀನು ಪಡೆದು ಉದ್ಯೋಗ ನೀಡದ ಕಾರಣ ಬೇಸರಗೊಂಡು ಯುವ ರೈತನೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡಿನ ಅಡಕನಹಳ್ಳಿ ಗ್ರಾಮದ ಸಿದ್ದರಾಜು ಆತ್ಮಹತ್ಯೆ ಮಾಡಿಕೊಂಡವರು.
ಕೆಐಎಡಿಬಿ ವತಿಯಿಂದ...
ದ್ವಿಚಕ್ರ ವಾಹನಗಳ ಮುಖಾಮುಖಿ ಢಿಕ್ಕಿ: ಮೂವರ ಸ್ಥಿತಿ ಗಂಭೀರ
ವಿಟ್ಲ: ಕಬಕ-ವಿಟ್ಲ ರಸ್ತೆಯ ಕಂಬಳಬೆಟ್ಟುವಿನಲ್ಲಿ ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಢಿಕ್ಕಿಯಾಗಿ ಮೂವರು ಗಂಭೀರ ಗಾಯಗೊಂಡಿದ್ದಾರೆ.
ಉರಿಮಜಲು ಸಮೀಪ ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಕೇರಳ ಕೊಲ್ಲಂ ಮೂಲದ ದಿನೇಶ್, ಅಡ್ಯನಡ್ಕ ಮೂಲದ ಸತೀಶ್, ವಸಂತ್ ಗಾಯಗೊಂಡವರು.
ಕಂಬಳಬೆಟ್ಟು...



















