ಮನೆ ಅಪರಾಧ ವಾಹನಗಳಿಗೆ ಆಟೊ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, 15 ಮಂದಿಗೆ ಗಾಯ

ವಾಹನಗಳಿಗೆ ಆಟೊ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, 15 ಮಂದಿಗೆ ಗಾಯ

0

ಮುಂಬೈ: ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ಆಟೊ ರಿಕ್ಷಾವೊಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿದ್ದಾರೆ ಎಂದು ‘ಪಿಟಿಐ’ ವರದಿ ಮಾಡಿದೆ.

Join Our Whatsapp Group

ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಶಹಾಪುರ ತಾಲೂಕಿನ ಘೋಟೆಘರ್ ಗ್ರಾಮದ ಖಿನಾವ್ಲಿ ಸೇತುವೆ ಬಳಿ ಮುಂಜಾನೆ 4.15ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಟೊ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಖಾಸಗಿ ಬಸ್, ಎರಡು ಕಾರುಗಳು ಮತ್ತು ಟೆಂಪೊವೊಂದಕ್ಕೆ ಡಿಕ್ಕಿ ಹೊಡೆದಿದೆ.

ಬಸ್‌ನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಆಟೊ ರಿಕ್ಷಾ ಚಾಲಕ ಸೇರಿದಂತೆ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ವೇಳೆ ಬಸ್ ನಾಸಿಕ್‌ನಿಂದ ಮುಂಬೈಗೆ ಹೊರಟ್ಟಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.