ಮನೆ ರಾಜ್ಯ ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ – 10 ಮಂದಿಗೆ ಗಾಯ..!

ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ – 10 ಮಂದಿಗೆ ಗಾಯ..!

0

ಮೈಸೂರು : ಕಾರು ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಚೌಹಳ್ಳಿ ಬಳಿ ನಡೆದಿದೆ.

ಅಪಘಾತದಲ್ಲಿ ಆಟೋದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಮೈಸೂರಿನ ಕೆ.ಆರ್​.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಆಟೋ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಟಿ.ನರಸೀಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.