ಮನೆ ಅಪರಾಧ ಟೆಂಪೋ ಟ್ರಾವೆಲರ್‌ ಗೆ ಆಟೋ ರಿಕ್ಷಾ ಡಿಕ್ಕಿ: ಐವರ ಸಾವು

ಟೆಂಪೋ ಟ್ರಾವೆಲರ್‌ ಗೆ ಆಟೋ ರಿಕ್ಷಾ ಡಿಕ್ಕಿ: ಐವರ ಸಾವು

0

ಕೇರಳ: ಮಂಚೇರಿಯಲ್ಲಿ ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್‌ ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಅಬ್ದುಲ್ ಮಜೀದ್ (50) ಮತ್ತು ಪ್ರಯಾಣಿಕರಾದ ಥೆಸ್ಲೀಮಾ (34) ಮುಹ್ಸಿನಾ (32) ಮತ್ತು ಅವರ ಮಕ್ಕಳಾದ ರೈಹಾ ಫಾತಿಮಾ (4) ಮತ್ತು ರಿನ್ಶಾ ಫಾತಿಮಾ (7) ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದಿಂದ ಶಬರಿಮಲೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್‌ ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಐವರು ಶಬರಿಮಲೆ ಯಾತ್ರಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದಿನ ಲೇಖನಮೈಸೂರಿನ ವಿಮಾನ ನಿಲ್ದಾಣಕ್ಕೆ  ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಹೆಸರಿಡಲು ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯ
ಮುಂದಿನ ಲೇಖನರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ: ಚಾಲಕ ಸಾವು