ಮನೆ ರಾಜ್ಯ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾದ ಆಯನೂರು ಮಂಜುನಾಥ್

ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾದ ಆಯನೂರು ಮಂಜುನಾಥ್

0

ಚಿತ್ರದುರ್ಗ: ಬಿಜೆಪಿ ತೊರೆದಿರುವ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಬುಧವಾರ ಜೆಡಿಎಸ್ ಸೇರ್ಪಡೆಯಾಗಿ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ‘ಬಿ’ ಫಾರ್ಂ ಪಡೆದರು.

Join Our Whatsapp Group

ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಲು ಹುಬ್ಬಳ್ಳಿಗೆ ತೆರಳುತ್ತಿದ್ದ ಅವರು ಚಿತ್ರದುರ್ಗ ಜೆಡಿಎಸ್ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾದರು. ಗುರುವಾರ ನಾಮಪತ್ರ ಸಲ್ಲಿಸುವುದಾಗಿ ಮಾಹಿತಿ ನೀಡಿದರು.

ಶಿವಮೊಗ್ಗದ ಶಾಂತಿ ಮತ್ತು‌ ಸುವ್ಯವಸ್ಥೆ ದೃಷ್ಟಿಯಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಫೆಬ್ರುವರಿಯಲ್ಲಿ ತೀರ್ಮಾನಿಸಿದ್ದೆ. ಬಿಜೆಪಿ ಟಿಕೆಟ್ ಕೈತಪ್ಪುವುದು ಖಚಿತವಾದ ಬಳಿಕ ಪಕ್ಷ ತೊರೆಯುವ ನಿರ್ಧಾರ ಮಾಡಿದೆ. ಸಿ.ಎಂ.ಇಬ್ರಾಹಿಂ ಹಾಗೂ ಕುಮಾರಸ್ವಾಮಿ ಅವರು ಜೆಡಿಎಸ್‌’ಗೆ ಆಹ್ವಾನಿಸಿ ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಪಕ್ಷ ಸೇರ್ಪಡೆ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಹಿಂದಿನ ಲೇಖನಮೊಮ್ಮಗ ಧವನ್ ರಾಕೇಶ್ ನನ್ನು ಉತ್ತರಾಧಿಕಾರಿಯಾಗಿ ಘೋಷಿಸಿದ ಸಿದ್ದರಾಮಯ್ಯ
ಮುಂದಿನ ಲೇಖನವಿಧಾನಸಭೆ ಚುನಾವಣೆ: ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ‍ಪಟ್ಟಿ ಬಿಡುಗಡೆ