ಮನೆ ದೇವಸ್ಥಾನ ಅಯೋಧ್ಯೆ ಶ್ರೀರಾಮ ಮಂದಿರ: ಜನವರಿಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ

ಅಯೋಧ್ಯೆ ಶ್ರೀರಾಮ ಮಂದಿರ: ಜನವರಿಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ

0

ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ರಾಮಲಲ್ಲಾ ಪ್ರವೇಶ ಆಗಲಿದೆ. 2024ರ ಜನವರಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ರಾಮಲಲ್ಲಾ ವಿಗ್ರಹವನ್ನು ರಾಮಮಂದಿರದ ಗರ್ಭ ಗೃಹದಲ್ಲಿ ಪ್ರತಿಷ್ಠಾಪಿಸುವ ಕಾರ್ಯಕ್ರಮ ನೆರವೇರಲಿದೆ.

Join Our Whatsapp Group

ಅಯೋಧ್ಯೆಯ ಶ್ರೀರಾಮ ಮಂದಿರ

ತನ್ನ ಮಂದಿರದ ಒಳಗೆ ವಿರಾಜಮಾನರಾಗಲಿದ್ದಾರೆ ರಾಮಲಲ್ಲಾ

ಇಡೀ ವಿಶ್ವವೇ ಅಯೋಧ್ಯೆಯತ್ತ ತಿರುಗಿ ನೋಡುವಂತೆ ಮಾಡುತ್ತೇವೆ: ಯುಪಿ ಸಿಎಂ ಯೋಗಿ ಆದಿತ್ಯನಾಥ್

ಬಿಜೆಪಿ ಮಹಾ ಸಂಪರ್ಕ ಅಭಿಯಾನ ಉದ್ದೇಶಿಸಿ ಯೋಗಿ ಆದಿತ್ಯನಾಥ್ ಮಾತು

ಲಖನೌ (ಉತ್ತರ ಪ್ರದೇಶ): ಅಯೋಧ್ಯಾ ಶ್ರೀರಾಮ ಮಂದಿರದ ಗರ್ಭ ಗೃಹದಲ್ಲಿ ರಾಮಲಲ್ಲಾ (ಬಾಲ ರಾಮ) ವಿಗ್ರಹ ಪ್ರತಿಷ್ಠಾಪನೆಯು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ನಡೆಯಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಖಚಿತಪಡಿಸಿದ್ಧಾರೆ. 2024ರ ಜನವರಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಇದಕ್ಕೂ ಮುನ್ನ 2023ರ ಅಂತ್ಯಕ್ಕೆ ಅಯೋಧ್ಯೆಯಲ್ಲಿ ಮಹಾ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ದೀಪೋತ್ಸವದಲ್ಲ ಈ ಬಾರಿ ಅಯೋಧ್ಯಾ ನಗರಿಯ ತುಂಬಾ 21 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಹಚ್ಚುವುದಾಗಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

500 ವರ್ಷಗಳ ಬಳಿಕ ರಾಮಲಲ್ಲಾ ತನ್ನ ಮಂದಿರದ ಒಳಗೆ ವಿರಾಜಮಾನರಾಗುವ ಸಂದರ್ಭದಲ್ಲಿ ಇಡೀ ವಿಶ್ವವೇ ಅಯೋಧ್ಯೆಯತ್ತ ತಿರುಗಿ ನೋಡುವಂತೆ ಮಾಡುತ್ತೇವೆ ಎಂದು ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ. ಅಯೋಧ್ಯೆಯಲ್ಲಿ ನಡೆದ ಬಿಜೆಪಿಯ ಮಹಾ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ ಯಶಸ್ವಿಯಾಗಿ 9 ವರ್ಷ ಪೂರೈಸಿದ್ದಕ್ಕೆ ಶುಭಾಶಯ ಕೋರಿದರು. ಜೊತೆಯಲ್ಲೇ ಬಿಜೆಪಿ ಮಹಾ ಸಂಪರ್ಕ ಅಭಿಯಾನವು ಮೋದಿ ಸರ್ಕಾರ 9 ವರ್ಷ ಪೂರೈಸಿದ ಸವಿ ನೆನಪಿಗೆ ನಡೆಯುತ್ತಿದೆ ಎಂದು ಹೇಳಿದರು.

2024ರ ಜನವರಿ 22 ರಂದು ಶ್ರೀರಾಮ ಮಂದಿರದ ಉದ್ಘಾಟನೆಗೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲು ಅಯೋಧ್ಯಾ ಶ್ರೀರಾಮಮಂದಿರ ಟ್ರಸ್ಟ್‌ ಸಿದ್ದತೆ ನಡೆಸುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ಯೋಗಿ ಆದಿತ್ಯನಾಥ್ ಈ ಒಂದು ಘೋಷಣೆ ಮಾಡಿದ್ದಾರೆ. ಆದ್ರೆ, ಈ ಸಂಬಂಧ ಪ್ರಧಾನಿ ಕಚೇರಿಯಿಂದ ಅಧಿಕೃತ ಘೋಷಣೆ ಇನ್ನಷ್ಟೇ ಹೊರಬೀಳಬೇಕಿದೆ.

ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಮುಂದಿನ ದಿನಗಳಲ್ಲಿ ಹಲವು ಕಾರ್ಯಕ್ರಮಗಳು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಹಾಗೂ ಪ್ರಚಾರ ಅಭಿಯಾನಗಳಲ್ಲಿ ಭಾಗವಹಿಸುವಂತೆ ಬಿಜೆಪಿ ಪಕ್ಷದ ಸಂಸದರಿಗೆ ಯೋಗಿ ಆದಿತ್ಯನಾಥ್ ಕರೆ ನೀಡಿದರು.

ತ್ರೇತಾಯುಗದ ಮಹಾ ನಗರ ಅಯೋಧ್ಯೆಯು ಇಡೀ ದೇಶಕ್ಕೇ ಸ್ಫೂರ್ತಿ ತುಂಬುತ್ತಿದೆ ಎಂದ ಯೋಗಿ ಆದಿತ್ಯನಾಥ್, ಪ್ರಧಾನಿ ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ದೇಶದಲ್ಲಿ ರಾಮರಾಜ್ಯ ನಿರ್ಮಾಣದ ಕನಸು ನನಸಾಗಿಸುವ ಪ್ರಯತ್ನವಿದು ಎಂದಿದ್ದಾರೆ.

ಭರದಿಂದ ಸಾಗಿದ ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯ, ಶೇ.75ರಷ್ಟು ಕೆಲಸ ಮುಕ್ತಾಯ

ತ್ರೇತಾಯುಗದಲ್ಲಿ ಅಯೋಧ್ಯೆಯಲ್ಲಿ ರಾಮರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಲಾಗಿತ್ತು. ಇದೀಗ ಮತ್ತೆ ರಾಮರಾಜ್ಯ ನಿರ್ಮಾಣದ ಕನಸು ನನಸಾಗಲಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಅಯೋಧ್ಯೆ ಮಾತ್ರವಲ್ಲ, ಇಡೀ ದೇಶಕ್ಕೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಪ್ರೇರಣೆ ಲಭಿಸಿದೆ ಎಂದು ಯೋಗಿ ಆದಿತ್ಯನಾಥ್ ಬಣ್ಣಿಸಿದ್ಧಾರೆ. ಅಯೋಧ್ಯೆಯನ್ನು ಇಡೀ ವಿಶ್ವದಲ್ಲೇ ವೈಭವೋಪೇತ ನಗರವನ್ನಾಗಿ ನಿರ್ಮಿಸಲಾಗುವುದೂ ಎಂದೂ ಯುಪಿ ಸಿಎಂ ಯೋಗಿ ಹೇಳಿದ್ದಾರೆ.

ಅಯೋಧ್ಯೆಯು ಆಡಳಿತಗಾರ ಹಾಗೂ ಪ್ರಜೆ ನಡುವಣ ಬಾಂಧವ್ಯ ಹೇಗಿರಬೇಕು ಎಂಬ ಪರಿಕಲ್ಪನೆಯನ್ನು ಹಾಕಿಕೊಟ್ಟಿತ್ತು. ಆದರೆ ಅಯೋಧ್ಯೆಯ ಹೆಸರನ್ನು ಹೇಳಲು ಈ ಹಿಂದೆ ಕೆಲವರು ಮುಜುಗರಪಡುತ್ತಿದ್ದರು ಎಂದು ಎಸ್‌ಪಿ ಹಾಗೂ ಬಿಎಸ್‌ಪಿ ವಿರುದ್ಧ ಯೋಗಿ ಪರೋಕ್ಷವಾಗಿ ಹರಿಹಾಯ್ದರು.