ನವದೆಹಲಿ: ಆಯುಷ್ಮಾನ್ ಭಾರತ ಯೋಜನೆಯಡಿ ಆರೋಗ್ಯ ವಿಮೆ ರಕ್ಷಣೆಯನ್ನು ಎಲ್ಲ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ವಿಸ್ತರಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.
2024–25ನೇ ಹಣಕಾಸು ವರ್ಷದ ಕೇಂದ್ರದ ಮಧ್ಯಂತರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ್ದಾರೆ.
ಕಳೆದ ವರ್ಷ ಡಿಸೆಂಬರ್ 27ರವರೆಗೆ 12 ಕೋಟಿ ಕುಟುಂಬಗಳ 55 ಕೋಟಿ ಜನರು ಈ ಯೋಜನೆಗೆ ಒಳಪಟ್ಟಿದ್ದರು ಎಂದು ಅವರು ತಿಳಿಸಿದ್ದಾರೆ.
ವಿಶ್ವದ ಅತಿ ದೊಡ್ಡ ಸಾರ್ವಜನಿಕ ನಿಧಿ ಆಯುಷ್ಮಾನ್ ಭಾರತ ಯೋಜನೆಯಡಿ ಪ್ರತಿ ಕುಟುಂಬಕ್ಕೆ ₹5 ಲಕ್ಷದವರೆಗೆ ಆರೋಗ್ಯ ವಿಮೆಗೆ ಅವಕಾಶವಿದೆ.