ಮನೆ ರಾಜ್ಯ ರಾಜ್ಯದಲ್ಲೂ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಭಾಗ್ಯ – ಕ್ಯಾಬಿನೆಟ್ ಮಹತ್ವದ ತೀರ್ಮಾನ

ರಾಜ್ಯದಲ್ಲೂ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಭಾಗ್ಯ – ಕ್ಯಾಬಿನೆಟ್ ಮಹತ್ವದ ತೀರ್ಮಾನ

0

ಬೆಂಗಳೂರು : ರಾಜ್ಯದ ಬಿ ಖಾತಾ ಆಸ್ತಿ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಜಿಬಿಎ ಮಾದರಿಯಲ್ಲೇ ರಾಜ್ಯದಲ್ಲೂ ಬಿ ಖಾತಾಗೆ ಎ ಖಾತಾ ಮಾನ್ಯತೆ ನೀಡಲು ಕ್ಯಾಬಿನೆಟ್ ತೀರ್ಮಾನಿಸಿದೆ.

ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ ವ್ಯಾಪ್ತಿಗಳಲ್ಲಿ ಎ ಖಾತಾ ಭಾಗ್ಯಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಬಿ ಖಾತಾ ನಿವೇಶನ, ಕಟ್ಟಡಗಳು, ಅಪಾರ್ಟ್‌ಮೆಂಟ್‌ಗಳಿಗೆ ಎ ಖಾತಾ ಮಾನ್ಯತೆ ಸಿಗಲಿದೆ. ಸುಮಾರು 10 ಲಕ್ಷ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಕೊಡಲು ಸರ್ಕಾರ ತೀರ್ಮಾನಿಸಿದೆ.

ದಂಡದ ಪ್ರಮಾಣ ನಿಗದಿ ಮಾಡಿಲ್ಲ.‌ ಈಗಾಗಲೇ ಜಿಬಿಎ ವ್ಯಾಪ್ತಿಯಲ್ಲಿ ಆಸ್ತಿಯ ಮಾರ್ಗಸೂಚಿ ದರದ 5% ದಂಡ ಕಟ್ಟಿ ಎ ಖಾತಾ ಪಡೆಯಲು ಅವಕಾಶ ಕೊಟ್ಟಿದೆ. ‌ಆದರೆ 5%ರಷ್ಟು ದಂಡಕ್ಕೆ ಆಕ್ಷೇಪ ವ್ಯಕ್ತವಾಗಿತ್ತು.‌

ಅಷ್ಟೇ ಅಲ್ಲ ಹೆಚ್ಚು ಅರ್ಜಿ ಸಲ್ಲಿಕೆಯೂ ಆಗಿಲ್ಲ. ಹಾಗಾಗಿ 5% ದಂಡದ ಪ್ರಮಾಣ ಇಳಿಕೆ ಬಗ್ಗೆ ಸರ್ಕಾರ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಹಾಗಾಗಿ ರಾಜ್ಯದ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ದಂಡ ನಿಗದಿ ಬಗ್ಗೆ ಸರ್ಕಾರ ಎಚ್ಚರಿಕೆ ಹೆಜ್ಜೆ ಇಡುತ್ತಿದೆ.