ಮನೆ ರಾಜಕೀಯ 2023ರ ವಿಧಾನಸಭೆ ಚುನಾವಣೆ: ಶೀಘ್ರದಲ್ಲೇ ಬಿ.ಎಸ್. ಯಡಿಯೂರಪ್ಪ ಅವರಿಂದ ರಾಜ್ಯ ಪ್ರವಾಸ

2023ರ ವಿಧಾನಸಭೆ ಚುನಾವಣೆ: ಶೀಘ್ರದಲ್ಲೇ ಬಿ.ಎಸ್. ಯಡಿಯೂರಪ್ಪ ಅವರಿಂದ ರಾಜ್ಯ ಪ್ರವಾಸ

0

ಬೆಂಗಳೂರು: 2023ರ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಇನ್ನೆರಡು ವಾರಗಳಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅವರು ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಮಾತನಾಡಿರುವ ಯಡಿಯೂರಪ್ಪ ಅವರು,  ಸ್ವಲ್ಪ ಹಿಂದೆಯೇ ಪ್ರವಾಸ ಪ್ರಾರಂಭಿಸಬೇಕಿತ್ತು. ಆದರೆ, ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ವಿಳಂಬವಾಯಿತು. ಇದೀಗ ಕೋವಿಡ್ -19 ಪ್ರಕರಣಗಳು ಕಡಿಮೆಯಾಗುತ್ತಿರುವುದರಿಂದ ಹದಿನೈದು ದಿನಗಳಲ್ಲಿ ಪ್ರವಾಸವನ್ನು ಪ್ರಾರಂಭಿಸುತ್ತೇನೆಂದು ಹೇಳಿದರು. 

ಪ್ರತಿ ಜಿಲ್ಲೆಯ ಬಿಜೆಪಿ ನಾಯಕರೊಂದಿಗೆ ಸಮಾಲೋಚನೆ ನಡೆಸುವ ಮೂಲಕ ಪಕ್ಷವನ್ನು ಬಲಪಡಿಸುವುದು ಪ್ರವಾಸದ ಗುರಿಯಾಗಿದೆ. “ಒಳ್ಳೆಯ ಕೆಲಸ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ನೀತಿಗಳು ಜನರನ್ನು ತಲುಪಿಸುವುದು, 2023 ರಲ್ಲಿ 130-140 ಸ್ಥಾನಗಳನ್ನು ಗೆಲ್ಲಲು ಇದು ನಮಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ. 

ಕಳೆದ ಜುಲೈನಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಕೂಡಲೇ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವ ಮೂಲಕ ಪಕ್ಷದ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿರುತ್ತೇನೆ ಎಂದು ಯಡಿಯೂರಪ್ಪ ಪ್ರತಿಪಾದಿಸಿದ್ದರು. ಆದರೆ ಬಿಜೆಪಿ ಹೈಕಮಾಂಡ್, ಸಾಮೂಹಿಕ ನಾಯಕತ್ವದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಏಕಾಂಗಿಯಾಗಿ ಹೋಗುವ ಅವರ ಎಲ್ಲಾ ಪ್ರಯತ್ನಗಳನ್ನು ವಿಫಲಗೊಳಿಸುವಲ್ಲಿ ಯಶಸ್ವಿಯಾಯಿತು. 

ತದ ನಂತರ ಯಡಿಯೂರಪ್ಪ ಅವರು ತಮ್ಮ ಪ್ರವಾಸ ಯೋಜನೆಯನ್ನು ಹಲವು ಬಾರಿ ಮುಂದೂಡಬೇಕಾದ ಪರಿಸ್ಥಿತಿ ಎದುರಾಯಿತು. ಪಕ್ಷದ ಒಳಗಿನ ನಾಯಕರು ನೀಡಿರುವ ಮಾಹಿತಿಗಳ ಪ್ರಕಾರ, ಯಡಿಯೂರಪ್ಪ ಇದೀಗ ಮತ್ತೆ ತಮ್ಮ ಪ್ರವಾಸವನ್ನು ಪ್ರಾರಂಭಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹಿಂದಿನ ಲೇಖನಸರ್ಕಾರಿ ಶಾಲೆಗಳಲ್ಲಿ ಪ್ರತ್ಯೇಕತೆಗೆ ಅವಕಾಶವಿಲ್ಲ: ಪ್ರತಾಪ್ ಸಿಂಹ
ಮುಂದಿನ ಲೇಖನಇಬ್ರಾಹಿಂ ಸುತಾರ್ ನಿಧನ : ಗಣ್ಯರಿಂದ ಸಂತಾಪ