ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೋ ಒ ಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ( ಕಾವಾ ), ಸಿದ್ದಾರ್ಥನಗರ , ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ( ಬಿ . ವಿ . ಎ ) ( ನಾಲ್ಕು ವರ್ಷದ ಎಂಟು ಸೆಮಿಸ್ಟರ್ ಎನ್ . ಇ . ಪಿ ಪದ್ಧತಿ ) ದೃಶ್ಯ ಕಲೆಯಲ್ಲಿ 2025-26 ನೇ ಶೈಕ್ಷಣಿಕ ಪ್ರಥಮ ಶಾಲೆಗೆ ಬಿ . ಬಿ . ಎ ಪದವಿ ಪ್ರವೇಶಕ್ಕಾಗಿ ಬಾಕಿ ಉಳಿದಿರುವ ಸೀಟುಗಳಿಗೆ ಮೈಸೂರು ವಿಶ್ವವಿದ್ಯಾನಿಲಯದ ಅಧಿಸೂಚನೆ ಸಂ : ಎಸಿ -9/01/2025-26 ಮೇ 22 ರಂದು ರೂ . 500/- ಗಳ ದಂಡ ಶುಲ್ಕದೊಂದಿಗೆ ಪ್ರವೇಶಕ್ಕೆ ಅವಕಾಶ ಕಲ್ಪಸಿ ಆನ್ ಲೈನ್ ( UUCMS ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ . ಅರ್ಜಿ ಸಲ್ಲಿಸಲು ಜುಲೈ 05 ಕೊನೆಯ ದಿನಾಂಕ .
ಸದರಿ ಪದವಿಯಲ್ಲಿ 3 ನೇ ಸೆಮಿಸ್ಟರ್ ನಿಂದ ಚಿತ್ರಕಲೆ , ಶಿಲ್ಪ ಕಲೆ , ಗ್ರಾಫಿಕ್ಸ್ ಕಲೆ ( ಅಚ್ಚು ಕಲೆ ), ಅನ್ವಯಕಲೆ , ಕಲಾ ಇತಿಹಾಸ ಮತ್ತು ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯ ನಂತರ .
ಅಂತರ್ಜಾಲದ ಮೂಲಕವೇ ಅರ್ಜಿ ಸಲ್ಲಿಸಬೇಕು . ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜುಲೈ 07 ರಂದು ಬೆಳಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಹಾಗೂ ಮಧ್ಯಾಹ್ನ 02 ಗಂಟೆಗೆ ವೈಯಕ್ತಿಕ ಸಂದರ್ಶನ ಇರುತ್ತೆ . ಆಸಕ್ತ ಅಭ್ಯರ್ಥಿಗಳ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸ htts:// uucms.karnataka.gov.in ಅಥವಾ https://www.cavamysore.karnataka.gov.in ಈ ಕಾರ್ಯಾಲಯದ ಸಹಾಯವಾಣಿಗೆ 0821-2438931 ಅನ್ನು ಸಂಪರ್ಕಿಸಲಾಗಿದೆ ಎಂದು ಚಾಮರಾಜೇಂದ್ರ ಕಲಾ ಕಾಲೇಜಿನ ಡೀನ್ ಅವರು ಪ್ರಕಟಣೆಯಲ್ಲಿ ಪ್ರಕಟಿಸಿದರು .














