ಮನೆ ರಾಜ್ಯ ಹುಚ್ಚರಾಯಸ್ವಾಮಿ ದೇವರ ಹೆಸರಿನಲ್ಲಿ ಬಿ.ವೈ. ವಿಜಯೇಂದ್ರ ಪ್ರಮಾಣವಚನ ಸ್ವೀಕಾರ

ಹುಚ್ಚರಾಯಸ್ವಾಮಿ ದೇವರ ಹೆಸರಿನಲ್ಲಿ ಬಿ.ವೈ. ವಿಜಯೇಂದ್ರ ಪ್ರಮಾಣವಚನ ಸ್ವೀಕಾರ

0

ಬೆಂಗಳೂರು: ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ ಅವರು ಹುಚ್ಚರಾಯಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

Join Our Whatsapp Group

ಶಿಕಾರಿಪುರ‌ ಕ್ಷೇತ್ರದಿಂದ ಬಿ.ವೈ.‌ವಿಜಯೇಂದ್ರ ಅವರು ಚೊಚ್ಚಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಇಂದು ಪ್ರಮಾಣವಚನ ಸ್ವೀಕರಿಸಲು ವಿಧಾನಸೌಧಕ್ಕೆ ಆಗಮಿಸಿದ ವಿಜಯೇಂದ್ರ ಒಳ ಪ್ರವೇಶಿಸುವ ಮುನ್ನ ಶಕ್ತಿಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿದರು. ಬಳಿಕ ವಿಧಾನಸಭೆ ಪ್ರವೇಶಿಸಿ, ಹುಚ್ಚರಾಯಸ್ವಾಮಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಶಿಕಾರಿಪುರ ಕ್ಷೇತ್ರವನ್ನು ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರು ಪ್ರತಿನಿಧಿಸುತ್ತಿದ್ದರು. ಆದರೆ, ಚುನಾವಣಾ ರಾಜಕೀಯದಿಂದ ಬಿಎಸ್ ​ವೈ ನಿವೃತ್ತಿ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನವನ್ನು ಅವರ ಪುತ್ರ ಬಿ.ವೈ. ವಿಜಯೇಂದ್ರ ತುಂಬುತ್ತಿದ್ದಾರೆ. ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ವಿಜಯೇಂದ್ರ 11,008 ಅಂತರಗಳಿಂದ ಗೆಲುವು ಸಾಧಿಸಿದರು.

ಹಿಂದಿನ ಲೇಖನಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ವರಿಷ್ಠರು ಹೇಳಿದ್ದನ್ನಷ್ಟೇ ಹೇಳಿದ್ದೇನೆ: ಎಂ.ಬಿ ಪಾಟೀಲ್ ಸ್ಪಷ್ಟನೆ
ಮುಂದಿನ ಲೇಖನಚಾಲಕರ ಕಷ್ಟ ಕೇಳಲು ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್​​ ನಲ್ಲಿ ಪ್ರಯಾಣಿಸಿದ ರಾಹುಲ್ ಗಾಂಧಿ