ಕರ್ನಾಟಕದ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಿವೈ ವಿಜಯೇಂದ್ರ ಮೊದಲ ಬಾರಿಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದಾರೆ.
ಬಿವೈ ರಾಘವೇಂದ್ರ ಅವರು ವಿಜಯೇಂದ್ರ ಅವರನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ರಾಜ್ಯದಲ್ಲಿ ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಬೇಕಿದೆ, ಮುಂಬರುವ ಲೋಕಸಭಾ ಚುನಾವಣೆ ನಮ್ಮ ಮುಂದಿರುವ ಸವಾಲು ಎಂದು ವಿಜಯೇಂದ್ರ ಹೇಳಿದ್ದಾರೆ.
ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕಿದೆ. ಅದಕ್ಕಾಗಿ ಎಲ್ಲರೂ ಕೈಜೋಡಿಸಬೇಕಿದೆ ಎಂದಿದ್ದಾರೆ. ನೂತನವಾಗಿ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿರುವ ವಿಜಯೇಂದ್ರ ನವೆಂಬರ್ 15ರಂದು ಔಪಚಾರಿಕವಾಗಿ ಅಧಿಕಾರ ವಹಿಸಿಕೊಂಡರು.
Saval TV on YouTube