ಮನೆ ರಾಜಕೀಯ ಕಾಂಗ್ರೆಸ್ ನಿಂದ ವಿದ್ಯಾರ್ಥಿಗಳ ಮನಸ್ಸಲ್ಲಿ ವಿಷ ಬೀಜ ಬಿತ್ತುವ ಕೆಲಸ: ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ ನಿಂದ ವಿದ್ಯಾರ್ಥಿಗಳ ಮನಸ್ಸಲ್ಲಿ ವಿಷ ಬೀಜ ಬಿತ್ತುವ ಕೆಲಸ: ಬಿ.ವೈ.ವಿಜಯೇಂದ್ರ

0

ಬೆಳಗಾವಿ: ಶಾಲಾ–ಕಾಲೇಜು ವಿದ್ಯಾರ್ಥಿಗಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ಮಂಗಳವಾರ  ಹಿಜಾಬ್ -ಕೇಸರಿ ಶಾಲು ವಿವಾದಕ್ಕೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಹಿಜಾಬ್–ಕೇಸರಿ ಶಾಲು ವಿವಾದ ಸೃಷ್ಟಿಸಿದ್ದೇ ಕಾಂಗ್ರೆಸ್‌. ಇದು ಅತ್ಯಂತ ಖಂಡನೀಯ ಎಂದರು.

ವಿದ್ಯಾರ್ಥಿಗಳು ಅಯಾ ಶಾಲೆ–ಕಾಲೇಜುಗಳ ಸಮವಸ್ತ್ರ ಧರಿಸಿ ಹಾಜರಾಗುವುದು ಹಿಂದಿನಿಂಲೂ ಬಂದಿರುವ ಪದ್ಧತಿ. ಎಲ್ಲರೂ ಒಂದೇ ಎನ್ನುವ ಭಾವವನ್ನು ಸಮವಸ್ತ್ರ ಸೂಚಿಸುತ್ತದೆ. ಶಾಲೆಗಳಲ್ಲಿ ಎಲ್ಲರೂ ಸಮಾನರು. ಅಲ್ಲಿ ಜಾತಿ ವಿಚಾರ ಬರಬಾರದು. ಹಿಂದೂ–ಮುಸ್ಲಿಂ ಎನ್ನುವುದು ಸುಳಿಯಬಾರದು. ಕ್ಯಾಂಪಸ್‌ಗೆ ಹೋದ ಮೇಲೆ ಎಲ್ಲರೂ ವಿದ್ಯಾರ್ಥಿಗಳಷ್ಟೆ’ ಎಂದರು.

ಹಿಜಾಬ್ ವಿಚಾರದಲ್ಲಿ ವಿಶೇಷವಾಗಿ ಕಾಂಗ್ರೆಸ್ ಮುಖಂಡರು ರಾಜಕಾರಣ ಮಾಡುತ್ತಿದ್ದಾರೆ. ಅವರು ಇದನ್ನು ಇಲ್ಲಿಗೇ ನಿಲ್ಲಿಸಿದರೆ ಒಳ್ಳೆಯದು. ಹಿಜಾಬ್ ವಿಚಾರ ಮುಂದಿಟ್ಟುಕೊಂಡು ರಾಜಕಾರಣ ಮಾಡುವ ದರ್ದು ಬಿಜೆಪಿಗಿಲ್ಲ. ಅದೇನಿದ್ದರೂ ಕಾಂಗ್ರೆಸ್‌ನವರ ಕೆಲಸ. ಬಿಜೆಪಿಯವರು ಮೂಗು ತೂರಿಸುವ ಪ್ರಶ್ನೆಯೇ ಇಲ್ಲ’ ಎಂದು ಪ್ರತಿಕ್ರಿಯಿಸಿದರು.

ಹಿಂದಿನ ಲೇಖನ2008ರ ಅಹಮದಾಬಾದ್ ಬಾಂಬ್ ಸ್ಫೋಟ ಪ್ರಕರಣ​: 28 ಆರೋಪಿಗಳು ಖುಲಾಸೆ
ಮುಂದಿನ ಲೇಖನರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ ಸಿಎಂ ಬೊಮ್ಮಾಯಿ