ಬಾಗಲಕೋಟೆ: ಜಿಲ್ಲೆಯ ಮಹಾಲಿಂಗಪುರದ ಭ್ರೂಣಹತ್ಯೆ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾದ ಆರೋಪದಡಿ ಉಪ ವಿಭಾಗಾಧಿಕಾರಿ ಸಹಿತ ಐವರು ಹಿರಿಯ ಅಧಿಕಾರಿಗಳಿಗೆ ಜಿಲ್ಲಾ ದಂಡಾಧಿಕಾರಿ ಜಾನಕಿ ಕೆ.ಎಂ. ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.
ಜಮಖಂಡಿ ಉಪ ವಿಭಾಗಾಧಿಕಾರಿ ಸಂತೋಷ ಕಾಮಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಕುಮಾರ ಯರಗಲ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯೂ ಆಗಿರುವ ಪಿಸಿಪಿಎನ್‌ಡಿಟಿ ಅಧ್ಯಕ್ಷ ಡಾ.ಡಿ.ಬಿ. ಪಟ್ಟಣಶೆಟ್ಟಿ, ರಬಕವಿ-ಬನಹಟ್ಟಿ ತಾಲೂಕು ವೈದ್ಯಾಧಿಕಾರಿ ಡಾ.ಗೈಬುಸಾಬ ಗಲಗಲಿ, ಜಿಲ್ಲಾ ಆಸ್ಪತ್ರೆಯ ರೇಡಿಯೋಲಾಜಿಸ್ಟ್ ಹಾಗೂ ಪಿಸಿಪಿಎನ್‌ಡಿಟಿ ಸದಸ್ಯ ಡಾ.ಅನೀಲ ಕಾನಡೆ ಅವರಿಗೆ, ಈ ಪ್ರಕರಣದ ಕುರಿತು 24 ಗಂಟೆಯಲ್ಲಿ ಉತ್ತರ ನೀಡುವಂತೆ ನೋಟಿಸ್‌ನಲ್ಲಿ ಎಚ್ಚರಿಕೆ ನೀಡಿದ್ದಾರೆ.
Saval TV on YouTube