ಮನೆ ಸುದ್ದಿ ಜಾಲ ಸರ್ವಧರ್ಮ ಸಮನ್ವಯದ ಪ್ರವಚನಕಾರ ಇಬ್ರಾಹಿಂ ಸುತಾರ ಇನ್ನಿಲ್ಲ

ಸರ್ವಧರ್ಮ ಸಮನ್ವಯದ ಪ್ರವಚನಕಾರ ಇಬ್ರಾಹಿಂ ಸುತಾರ ಇನ್ನಿಲ್ಲ

0

ಬಾಗಲಕೋಟೆ: ಭಗವದ್ಗೀತೆ, ವಚನ, ಸೂಫಿ ಪರಂಪರೆಯ ರಸಪಾಕವನ್ನು ತಮ್ಮ ಪ್ರವಚನಗಳ ಮೂಲಕ ಧಾರೆಯೆರೆದು ಹಿಂದೂ ಮುಸ್ಲಿಂ ಸಾಮರಸ್ಯದ ಕೊಂಡಿಯಾಗಿದ್ದ ಸಂತ, ಕೃಷ್ಣೆಯ ನಾಡಿನ ಕಬೀರ, ಪದ್ಮಶ್ರೀ ಪುರಸ್ಕೃತ ‘ಇಬ್ರಾಹಿಂ ಸುತಾರ್’ ಅವರು ಇಂದು ಮುಂಜಾನೆ  ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇಬ್ರಾಹಿಂ ಸುತಾರ್‌ ಅವರು ಹೃದಯದ ನೋವಿಗೆ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು. ಇದರ ನಡುವೆ ಶನಿವಾರ ಬೆಳಿಗ್ಗೆ  ಇಬ್ರಾಹಿಂ ಸುತಾರ್‌ ಅವರಿಗೆ ಮತ್ತೆ ಲಘು ಹೃದಯಾಘಾತವಾಗಿತ್ತು. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದದಾರೂ, ಬೆಳಿಗ್ಗೆ 6:30ಕ್ಕೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಮಹಾಲಿಂಗಪುರದ ಇಬ್ರಾಹಿಂ ಸುತಾರ ಅವರಿಗೆ ಪತ್ನಿ, ಪುತ್ರ ಹಾಗೂಇಬ್ಬರು ಪುತ್ರಿಯರು ಇದ್ದಾರೆ.

ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದ ಬಡ ಕುಟುಂಬದಲ್ಲಿ ಇಬ್ರಾಹಿಂ ಸುತಾರ 1940ರ ಮೇ 10ರಂದು ಜನಿಸಿದರು. ಇವರ ತಂದೆ ನಬಿಸಾಹೇಬ್ ಮತ್ತು ತಾಯಿ ಅಮೀನಾಬಿ. ಇವರ ತಂದೆ ಬಡಗಿ ವೃತ್ತಿಯನ್ನು ಮಾಡಿಕೊಂಡಿದ್ದು, ಬಡ ಕುಟುಂಬದಲ್ಲಿ ಜನಿಸಿದ ಇಬ್ರಾಹಿಂ ಸುತಾರ ಅವರಿಗೆ ಓದಲು ಸಾಧ್ಯವಾಗಲಿಲ್ಲ.

ಇನ್ನೂ ಸುತಾರ ಅವರನ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸರ್ವಧರ್ಮ ಸಮನ್ವಯದ ಪ್ರವಚನಕಾರರು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಮ್ ಸುತಾರ ಅವರು ಇಂದು ಮುಂಜಾನೆ ನಿಧನರಾದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ‌.

ಸಮಾಜದಲ್ಲಿ ಸಾಮರಸ್ಯದ ಬೀಜ ಬಿತ್ತಲು ಶ್ರಮಿಸಿದ ಅವರ ದಿವ್ಯಾತ್ಮಕ್ಕೆ ದೇವರು ಶಾಂತಿ ನೀಡಲಿ ಹಾಗೂ ಈ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಿಎಂ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

ಹಿಂದಿನ ಲೇಖನಗಣರಾಜ್ಯೋತ್ಸವ ಪೆರೇಡ್: ರಾಜ್ಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ
ಮುಂದಿನ ಲೇಖನಸರ್ಕಾರಿ ಶಾಲೆಗಳಲ್ಲಿ ಪ್ರತ್ಯೇಕತೆಗೆ ಅವಕಾಶವಿಲ್ಲ: ಪ್ರತಾಪ್ ಸಿಂಹ