ಬಾಗಲಕೋಟೆ: ಬೀಳಗಿ ತಾಲ್ಲೂಕಿನ ಸುನಗ ಗ್ರಾಮದಲ್ಲಿರುವ ವಿದ್ಯಾರ್ಥಿನಿಯರ ಅಂಬೇಡ್ಕರ್ ವಸತಿ ನಿಲಯದ ವಾರ್ಡನ್ ಸಂಕನಗೌಡ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ.
ಹಾಸ್ಟೇಲ್ನ 3-4 ವಿದ್ಯಾರ್ಥಿನಿಯರ ಎದೆ, ನಡು ಹಾಗೂ ಹಿಂಭಾಗ ಮುಟ್ಟಿ ವಾರ್ಡನ್ ಸಂಕನಗೌಡ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿನಿಯರು ಹಾಗೂ ಪೋಷಕರು ಆರೋಪಿಸಿದ್ದಾರೆ.
ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಪ್ರಶ್ನಿಸಿದರೇ, ನೋಟಿಸ್ ನೀಡಿದ್ದೇವೆ ಎಂಬ ಬೇಜವಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಆದರೆ ಹಾಸ್ಟೆಲ್ ವಾರ್ಡನ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.
ಸದ್ಯ ವಾರ್ಡನ್ ಹಾಸ್ಟೆಲ್ ಗೆ ಬಾರದೆ ರಜೆಯಲ್ಲಿದ್ದಾನೆ ಎನ್ನಲಾಗಿದೆ.
Saval TV on YouTube