ಮನೆ ಅಪರಾಧ ಬಾಗಲಕೋಟೆ: ವಿದ್ಯಾರ್ಥಿನಿಯರ ಅಂಬೇಡ್ಕರ್ ವಸತಿ ನಿಲಯದ ವಾರ್ಡನ್​​ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಬಾಗಲಕೋಟೆ: ವಿದ್ಯಾರ್ಥಿನಿಯರ ಅಂಬೇಡ್ಕರ್ ವಸತಿ ನಿಲಯದ ವಾರ್ಡನ್​​ ವಿರುದ್ಧ ಲೈಂಗಿಕ ಕಿರುಕುಳ ಆರೋಪ

0

ಬಾಗಲಕೋಟೆ: ಬೀಳಗಿ ತಾಲ್ಲೂಕಿನ ಸುನಗ ಗ್ರಾಮದಲ್ಲಿರುವ ವಿದ್ಯಾರ್ಥಿನಿಯರ ಅಂಬೇಡ್ಕರ್ ವಸತಿ ನಿಲಯದ ವಾರ್ಡನ್​​ ಸಂಕನಗೌಡ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ.

ಹಾಸ್ಟೇಲ್​​ನ 3-4 ವಿದ್ಯಾರ್ಥಿನಿಯರ ಎದೆ, ನಡು ಹಾಗೂ ಹಿಂಭಾಗ ಮುಟ್ಟಿ ವಾರ್ಡನ್ ಸಂಕನಗೌಡ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿನಿಯರು ಹಾಗೂ ಪೋಷಕರು ಆರೋಪಿಸಿದ್ದಾರೆ.

ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಪ್ರಶ್ನಿಸಿದರೇ, ನೋಟಿಸ್​ ನೀಡಿದ್ದೇವೆ ಎಂಬ ಬೇಜವಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಆದರೆ ಹಾಸ್ಟೆಲ್ ವಾರ್ಡನ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.

ಸದ್ಯ ವಾರ್ಡನ್​​ ಹಾಸ್ಟೆಲ್ ​ಗೆ ಬಾರದೆ ರಜೆಯಲ್ಲಿದ್ದಾನೆ ಎನ್ನಲಾಗಿದೆ.

ಹಿಂದಿನ ಲೇಖನರಾಯಚೂರು: ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ
ಮುಂದಿನ ಲೇಖನದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ದಂಪತಿ ಸಾವು