ಬಾಗಲಕೋಟೆ: ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ಬಳಿಕ ಶನಿವಾರ ಬೆಳ್ಳಂಬೆಳಗ್ಗೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಗದನ್ನು ಚುನಾವಣೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.
ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ, ಸಾಗಿಸುತ್ತಿದ್ದ ವಿವಿಧ ಚೆಕ್ ಪೋಸ್ಟ್ ಗಳಲ್ಲಿ ಒಟ್ಟು ಏಳು ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ.
ಜಮಖಂಡಿ ತಾಲೂಕಿನ ಹುನ್ನೂರ ಚೆಕ್ ಪೋಸ್ಟ್ ನಲ್ಲಿ ಆರು ಲಕ್ಷ ರೂ. ಮತ್ತು ಹುಲ್ಯಾಳ ಚೆಕ್ ಪೋಸ್ಟನಲ್ಲಿ ಒಂದು ಲಕ್ಷ ರೂ.ಗಳ ಹಣ ವಶಕ್ಕೆ ಪಡೆಯಲಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ಹೇಳಿದ್ದಾರೆ.
ನೀತಿ ಸಂಹಿತೆ ಜಾರಿಯಾದ ಬಳಿಕ ಏಳು ಲಕ್ಷದಷ್ಟು ನಗದು ಇದೇ ಮೊದಲ ಬಾರಿಗೆ ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ.