ಮನೆ ಕಾನೂನು ಬಾಗಲಕೋಟೆ: ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಸ್ತೆದಾರ್

ಬಾಗಲಕೋಟೆ: ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಸ್ತೆದಾರ್

0

ಬಾಗಲಕೋಟೆ: ಹತ್ತು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಬೀಳಗಿಯ ತಹಶೀಲ್ದಾರ್ ಕಚೇರಿಯ ಶಿರಸ್ತೆದಾರ್ ಮಹಾಂತೇಶ ಹುರಕಡ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣ ತಹಶೀಲ್ದಾರ ಕಚೇರಿಯಲ್ಲಿ ನಡೆದಿದೆ.

ಸೀಮಿಕೇರಿ ಗ್ರಾಮದ ಮಂಜುನಾಥ ದಳವಾಯಿ ಎನ್ನುವವರಿಂದ ಹತ್ತು ಸಾವಿರ ಲಂಚ ಪಡೆಯುತ್ತಿದ್ದಾಗ ಶಿರಸ್ತೆದಾರ್ ಮಹಾಂತೇಶ ಹುರಕಡ್ಲಿ ಅವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ತರಿಗೆ ದೂರು ನೀಡಿದ ಮಂಜುನಾಥ್ ದಳವಾಯಿ ಎನ್ನುವರಿಗೆ ಸಂಬಂಧಿಸಿದ ಬೀಳಗಿ ತಾಲೂಕಿನ ಸುನಗ ಗ್ರಾಮದಲ್ಲಿ ಇರುವಂತಹ ಜಮೀನು ಒಂದರ  ಪಹಣಿ ಕಾಲಂನಲ್ಲಿಯ ಷರತ್ತುಗಳನ್ನು ಕಡಿಮೆ ಮಾಡುವುದಕ್ಕಾಗಿ ಹತ್ತು ಸಾವಿರ ರೂಪಾಯಿಗಳ ಲಂಚದ ಬೇಡಿಕೆಯನ್ನು ಇಟ್ಟಿದ್ದರು ಎನ್ನಲಾಗಿದೆ. ಹೀಗಾಗಿ ದೂರು ನೀಡಿದ ಮಂಜುನಾಥ ದಳವಾಯಿಯವರು ಲೋಕಾಯುಕ್ತರ ಮೊರೆ ಹೋಗಿದ್ದರು.

 ಲೋಕಾಯುಕ್ತ ಎಸ್ಪಿ ಅನಿತ ಹದ್ದನ್ನವರ್ ಅವರ ಮಾರ್ಗದರ್ಶನದಲ್ಲಿ ಬಾಗಲಕೋಟೆಯ ಲೋಕಾಯುಕ್ತ ಡಿ ವೈ ಎಸ್ ಪಿ ಪುಷ್ಪಲತಾ. ಎನ್  ಅವರ ನೇತೃತ್ವದಲ್ಲಿ ಸಿಪಿಐ ಬಸವರಾಜ್ ಅವಟಿ ಹಾಗೂ ಬಸವಗೌಡ ಪಾಟೀಲ್  ಅವರು ಕಾರ್ಯಾಚರಣೆಯನ್ನು ನಡೆಸಿ ಆರೋಪಿಯನ್ನ  ರೆಡ್ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಸದ್ಯಕ್ಕೆ ಲೋಕಾಯುಕ್ತ ಪೊಲೀಸರು ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.