ಮನೆ ರಾಷ್ಟ್ರೀಯ ‘ಮಾನವ ಜಿಪಿಎಸ್’ ಎಂದೇ ಕುಖ್ಯಾತಿ ಪಡೆದಿದ್ದ ಬಾಗು ಖಾನ್ ಹತ್ಯೆ..!

‘ಮಾನವ ಜಿಪಿಎಸ್’ ಎಂದೇ ಕುಖ್ಯಾತಿ ಪಡೆದಿದ್ದ ಬಾಗು ಖಾನ್ ಹತ್ಯೆ..!

0

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ರಮವಾಗಿ ಒಳನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಮೃತ ಇಬ್ಬರ ಪೈಕಿ ‘ಮಾನವ ಜಿಪಿಎಸ್’ ಎಂದೇ ಕುಖ್ಯಾತಿ ಪಡೆದಿರುವ ಬಾಗು ಖಾನ್ ಹತ್ಯೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಸಮಂದರ್ ಚಾಚಾ’ ಎಂದೂ ಕರೆಯಲ್ಪಡುವ ಬಾಗು ಖಾನ್, 1995ರಿಂದ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನೆಲೆಸಿದ್ದ. ಭಾರತದ ಒಳಗೆ ಉಗ್ರರನ್ನು ಕಳುಹಿಸಲು ಸಹಾಯ ಮಾಡುವ ಅತ್ಯಂತ ಹಳೇ ಹಾಗೂ ಪ್ರಮುಖ ಮಾಸ್ಟರ್ ಮೈಂಡ್ ಆಗಿದ್ದ.

ಭದ್ರತಾ ಮೂಲಗಳ ಪ್ರಕಾರ, ಗುರೇಜ್ ವಲಯದ ವಿವಿಧ ಪ್ರದೇಶಗಳಿಂದ 100ಕ್ಕೂ ಹೆಚ್ಚು ನುಸುಳುಕೋರತನದ ಯತ್ನಗಳಿಗೆ ಬಾಗು ಖಾನ್ ಕಾರಣನಾಗಿದ್ದ. ಇಲ್ಲಿನ ಕಠಿಣ ಭೂಪ್ರದೇಶ ಮತ್ತು ರಹಸ್ಯ ಮಾರ್ಗಗಳ ಬಗ್ಗೆ ಆತನಿಗೆ ಇದ್ದ ಆಳವಾದ ಜ್ಞಾನದಿಂದ ಹೆಚ್ಚಿನ ಉಗ್ರರನ್ನು ಭಾರತಕ್ಕೆ ಕಳುಹಿಸಲು ಯಶಸ್ವಿಯಾಗಿದ್ದ. ಇದೇ ಕಾರಣಕ್ಕೆ ಆತ ಎಲ್ಲಾ ಉಗ್ರಗಾಮಿ ಗುಂಪುಗಳಿಗೂ ವಿಶೇಷ ವ್ಯಕ್ತಿಯಾಗಿದ್ದ.

ಬಾಗು ಖಾನ್ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಆಗಿದ್ದರೂ, ನಿಯಂತ್ರಣ ರೇಖೆಯುದ್ದಕ್ಕೂ ಇರುವ ಗುರೇಜ್ ಮತ್ತು ಅದರ ನೆರೆಯ ವಲಯಗಳಿಂದ ಉಗ್ರರ ಒಳನುಸುಳಿವಿಕೆ ಯಶಸ್ವಿಯಾಗಲು ಪ್ರತಿಯೊಂದು ಉಗ್ರ ಸಂಘಟನೆಗೂ ಸಹಾಯ ಮಾಡುತ್ತಿದ್ದ. ಬಾಗು ಖಾನ್ ಭಯೋತ್ಪಾದಕ ಹಿಜ್ಬುಲ್ ಮುಜಾಹಿದ್ದೀನ್‌ನೊಂದಿಗೆ ಸಹ ಸಂಬಂಧ ಹೊಂದಿದ್ದ ಎಂದು ಮೂಲಗಳು ತಿಳಿಸಿವೆ.