ಮನೆ ಕಾನೂನು ವಕೀಲ ಜಗದೀಶ್ ಕೆ.ಎನ್.ಗೆ ಜಾಮೀನು ಮಂಜೂರು

ವಕೀಲ ಜಗದೀಶ್ ಕೆ.ಎನ್.ಗೆ ಜಾಮೀನು ಮಂಜೂರು

0

ಬೆಂಗಳೂರು: ಕೊಲೆ ಯತ್ನ ಪ್ರಕರಣದಡಿ ಬಂಧಿಸಲಾಗಿರುವ ವಕೀಲ ಜಗದೀಶ್ ಕೆ.ಎನ್. ಮಹಾದೇವ್ ಅವರಿಗೆ ಜಾಮೀನು ಮಂಜೂರು ಮಾಡಿ ನಗರದ ನ್ಯಾಯಾಲಯ ಆದೇಶ ಹೊರಡಿಸಿದೆ.

ನ್ಯಾಯಾಲಯ ಆವರಣದಲ್ಲಿ ನಡೆದಿದ್ದ ಗಲಾಟೆ ಸಂಬಂಧ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಕೀಲರೊಬ್ಬರ ಮರ್ಮಾಂಗಕ್ಕೆ ಒದ್ದು ಕೊಲೆಗೆ ಯತ್ನಿಸಿದ ಆರೋಪದಡಿ ಜಗದೀಶ್ ಅವರನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದಲ್ಲಿ ಜಾಮೀನು ಕೋರಿ ಜಗದೀಶ್ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಇನ್ನೊಂದು ಪ್ರಕರಣದ ವಿಚಾರಣೆ ಮಾ. 7ಕ್ಕೆ: ಜಾತಿ ನಿಂದನೆ ಆರೋಪದಡಿ ಜಗದೀಶ್ ವಿರುದ್ಧ ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲೂ ಜಾಮೀನು ಕೋರಿ ಜಗದೀಶ್ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ, ವಾದ–ಪ್ರತಿವಾದ ಆಲಿಸಿದೆ. ಮುಂದಿನ ವಿಚಾರಣೆಯನ್ನು ಮಾ. 7ಕ್ಕೆ ಮುಂದೂಡಿದೆ.

ಹಿಂದಿನ ಲೇಖನಬಿಎಸ್ ವೈ ಆಶೀರ್ವಾದದಿಂದ ನಾನು ಸಿಎಂ ಆಗಿದ್ದೇನೆ: ಬಸವರಾಜ ಬೊಮ್ಮಾಯಿ.
ಮುಂದಿನ ಲೇಖನಬೆಂಗಳೂರಿನ ಹೋಟೆಲ್​ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: 7 ಮಂದಿ ಸಿಬ್ಬಂದಿಗೆ ಗಾಯ