ಮನೆ ರಾಜ್ಯ ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಭಜರಂಗದಳ ಕಾರ್ಯಕರ್ತರು

ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಭಜರಂಗದಳ ಕಾರ್ಯಕರ್ತರು

0

ಮಂಡ್ಯ: ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದರೆ ಭಜರಂಗದಳವನ್ನು ನಿಷೇಧಿಸುವ ನಿರ್ಧಾರವನ್ನು ವಿರೋಧಿಸಿ ಭಜರಂಗದಳ ಕಾರ್ಯಕರ್ತರು ಗುರುವಾರ ಮಂಡ್ಯದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Our Whatsapp Group

ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ಹಿಂದೂ ವಿರೋದಿ ಕಾಂಗ್ರೆಸ್​’ಗೆ ಮತ ನೀಡ ಬೇಡಿ ಎಂದು ಆಕ್ರೋಶ ಹೊರಹಾಕಿದ್ದಾರೆ.

ಮುಂಬರುವ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆಯನ್ನು ಸಹ ಕಾರ್ಯಕರ್ತರು ನೀಡಿದ್ದಾರೆ.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಭರವಸೆಯನ್ನು ನೀಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಾಂಗ್ರೆಸ್ ನಿಲುವನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಕೆಎಸ್ ಈಶ್ವರಪ್ಪ ಒಂದು ಹೆಜ್ಜೆ ಮುಂದೆ ಹೋಗಿ  ಕಾಂಗ್ರೆಸ್​ನ ಪ್ರಣಾಳಿಕೆಯ ಪ್ರತಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.

ಕರ್ನಾಟಕದಲ್ಲಿ ಭಜರಂಗದಳವನ್ನು ನಿಷೇಧಿಸುವ ಯಾವುದೇ ವಿಚಾರ ಇಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಗುರುವಾರ ಹೇಳಿದ್ದಾರೆ. ಕರ್ನಾಟಕದಲ್ಲಿ ಭಜರಂಗದಳವನ್ನು ನಿಷೇಧಿಸಲು ಕಾಂಗ್ರೆಸ್​ ಯೋಜಿಸುತ್ತಿಲ್ಲ. ಯಾವುದೇ ಸಂಘಟನೆಗಳನ್ನು ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲ ಎಂದು ತಿಳಿಸಿದ್ದಾರೆ.