ಬೆಂಗಳೂರು : ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ವಿಚಾರ ಪ್ರಸ್ತಾಪವಾಗಿರುವುದು ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಚಿವ ವಿ.ಸುನಿಲ್ ಕುಮಾರ್ ಅವರು, ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಒಂದೇ ನಾಣ್ಯದ ಎರಡು ಮುಖ.ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧಿಸುವುದು ಸೇರಿದಂತೆ ಕಾನೂನು ಕ್ರಮ ತೆಗೆದುಕೊಳ್ಳುವ ವಿಚಾರವನ್ನು ಕಾಂಗ್ರೆಸ್ ಪ್ರಸ್ತಾಪಿಸಿದೆ.
ಮಾನ್ಯ ಡಿಕೆಶಿ ಹಾಗೂ ಸಿದ್ದರಾಮಯ್ಯನವರೇ, ನಾವು ಪಿಎಫ್ ಐ ನಿಷೇಧ ಮಾಡಿದ್ದೇವೆಂಬ ಸಂಕಟ ಹಾಗೂ ದ್ವೇಷವನ್ನು ಭಜರಂಗದಳ ನಿಷೇಧದ ಮೂಲಕ ತೀರಿಸಿಕೊಳ್ಳಲು ಹೊರಟಿದ್ದೀರಾ ? ನಿಮ್ಮ ಹಿಂದೂ ವಿರೋಧಿ ನಿಲುವಿಗೆ ಧಿಕ್ಕಾರ ಎಂದು ಕಿಡಿಕಾರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಪ್ರಹ್ಲಾದ ಜೋಶಿ ಅವರು, ದೇಶ ವಿಭಜನೆ ಮಾಡಲು ಹೊರಟ ದೇಶದ್ರೋಹಿ ಪಿಎಫ್ಐ ಅನ್ನು ಬ್ಯಾನ್ ಮಾಡಿದಕ್ಕೆ ಇದೀಗ ಕಾಂಗ್ರೆಸ್ ಪಕ್ಷವು ತುಷ್ಟಿಕರಣ ರಾಜಕಾರಣಕ್ಕಾಗಿ ದೇಶ ಭಕ್ತ ಸಂಘಟನೆ ಭಜರಂಗದಳ ನಿಷೇಧ ಮಾಡುವುದಾಗಿ ಘೋಷಿಸಿದೆ. ಆ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ದೇಶವನ್ನು ಏನೂ ಮಾಡಲು ಹೊರಟ್ಟಿದ್ದಾರೆ ಎಂದು ಕಿಡಿಕಾರಿದರು.














