ಮನೆ ರಾಷ್ಟ್ರೀಯ ಬಕ್ರೀದ್ ಹಬ್ಬ: ಶುಭಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ

ಬಕ್ರೀದ್ ಹಬ್ಬ: ಶುಭಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ

0

ದೆಹಲಿ: ಇಂದು ದೇಶದೆಲ್ಲೆಡೆ ಮುಸ್ಲಿಂ ಸಮುದಾಯ ಬಕ್ರೀದ್ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಿದೆ.

Join Our Whatsapp Group

ಬಕ್ರೀದ್ ತ್ಯಾಗದ ಹಬ್ಬವಾಗಿದ್ದು, ಇದು ಇಸ್ಲಾಮಿಕ್ ಸಮುದಾಯವು ಆಚರಿಸುವ ಎರಡನೇ ಪ್ರಮುಖ ಹಬ್ಬವಾಗಿದೆ. ಈ ಹಬ್ಬದಂದು ದೇಶದ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವಿಟರ್​​ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವಿಟರ್ ಮೂಲಕ ಶುಭಾಶಯ ಕೋರಿದ್ದು, ಈದ್-ಉಲ್-ಅಧಾದ ಶುಭಾಶಯಗಳು. ಈ ದಿನ ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಇದು ನಮ್ಮ ಸಮಾಜದಲ್ಲಿ ಒಗ್ಗಟ್ಟು ಮತ್ತು ಸಾಮರಸ್ಯದ ಮನೋಭಾವವನ್ನು ಎತ್ತಿ ಹಿಡಿಯಲಿ ಈದ್ ಮುಬಾರಕ್ ಎಂದು ತಿಳಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಸ್ಲಾಂ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಈದ್-ಉಜ್-ಜುಹಾ ಈ ಶುಭ ಸಂದರ್ಭದಲ್ಲಿ, ನಾನು ಎಲ್ಲಾ ದೇಶವಾಸಿಗಳಿಗೆ, ವಿಶೇಷವಾಗಿ ಮುಸ್ಲಿಂ ಸಹೋದರ ಸಹೋದರಿಯರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ.

ಈದ್-ಉಜ್-ಜುಹಾ ಪ್ರೀತಿ, ತ್ಯಾಗದ ಪವಿತ್ರ ಹಬ್ಬವಾಗಿದೆ. ಈ ಹಬ್ಬವು ಪರಿತ್ಯಾಗದ ಮಾರ್ಗವನ್ನು ಅನುಸರಿಸಲು ಮತ್ತು ಮಾನವೀಯತೆಯ ಸೇವೆಯನ್ನು ನಿಸ್ವಾರ್ಥವಾಗಿ ಮಾಡಲು ಪ್ರೇರೇಪಿಸುತ್ತದೆ. ಈ ಸಂದರ್ಭದಲ್ಲಿ ಸಮಾಜದಲ್ಲಿ ಪರಸ್ಪರ ಸೌಹಾರ್ದತೆಯನ್ನು ಹೆಚ್ಚಿಸಲು ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಎಂದು ಟ್ವಿಟರ್​​ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.