ಬೆಂಗಳೂರು(Bengaluru): ಪಿಎಫ್‌ಐ ಸೇರಿದಂತೆ ಅದರ ಬೆಂಬಲಿತ ಸಂಘಟನೆಗಳನ್ನು ಕೇಂದ್ರ ಸರ್ಕಾರವು ಐದು ವರ್ಷಗಳ ನಿಷೇಧಿಸಿದ್ದು ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್ ಹೆಚ್ಚಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.
ಯಾವುದೇ ಪ್ರತಿಭಟನೆ, ಅಹಿತಕರ ಘಟನೆಗೆ ಅವಕಾಶ ನೀಡದಂತೆ ಪೊಲೀಸರು ಎಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆ, ಡಿಜಿ ಹಳ್ಳಿ, ಕೆಜಿ ಹಳ್ಳಿಯ ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ನಿಯೋಜನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಸೂಕ್ಷ್ಮ ಜಿಲ್ಲೆಗಳಲ್ಲಿ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.
Saval TV on YouTube