ಮನೆ ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋಗೆ ನಿರ್ಬಂಧ: ಮಧ್ಯರಾತ್ರಿಯೇ ಆದೇಶ ಹಿಂಪಡೆದ ಸರ್ಕಾರ

ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋಗೆ ನಿರ್ಬಂಧ: ಮಧ್ಯರಾತ್ರಿಯೇ ಆದೇಶ ಹಿಂಪಡೆದ ಸರ್ಕಾರ

0

ಬೆಂಗಳೂರು(Bengaluru): ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಅನಧಿಕೃತವಾಗಿ ಫೋಟೋ ತೆಗೆಯುವುದು, ವಿಡಿಯೊ ಮಾಡುವುದಕ್ಕೆ ನಿರ್ಬಂಧ ಹೇರಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಸರ್ಕಾರ ಹಿಂಪಡೆದಿದೆ. 

ಸಾರ್ವಜನಿಕರು ಸರ್ಕಾರಿ ಕಚೇರಿಯ ಸಮಯದಲ್ಲಿ ಬಂದು ಫೋಟೋ, ವಿಡಿಯೊ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಾರೆ. ಇದು ದುರ್ಬಳಕೆಯಾಗುವ ಸಾಧ್ಯತೆಯಿದೆ. ಇದರಿಂದ ಸರ್ಕಾರಕ್ಕೆ ಮತ್ತು ಸರ್ಕಾರದ ಇಲಾಖೆಗಳ ಘನತೆಗೆ ಕುಂದುಂಟಾಗುತ್ತದೆ. ವಿಶೇಷವಾಗಿ ಮಹಿಳಾ ನೌಕರರಿಗೆ ತೊಂದರೆಯುಂಟಾಗುತ್ತದೆ.  ಹೀಗಾಗಿ ಸರ್ಕಾರಿ ಕಚೇರಿಯ ಸಮಯದಲ್ಲಿ ಸಾರ್ವಜನಿಕರು ಅನಧಿಕೃತವಾಗಿ ನಿಷೇಧಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸರ್ಕಾರಕ್ಕೆ ಮನವಿ ಮಾಡಿತ್ತು. 

ಸರ್ಕಾರಿ ಕಚೇರಿಗಳಲ್ಲಿ ಫೋಟೋ ವಿಡಿಯೊ ಮಾಡುವುದನ್ನು ನಿಷೇಧಿಸಿ ಸರ್ಕಾರ ಜುಲೈ 15ರಂದು ಆದೇಶ ಹೊರಡಿಸಿತ್ತು.

ಈ ಆದೇಶವನ್ನು ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಮಧ್ಯರಾತ್ರಿಯೇ ಆದೇಶವನ್ನು ಹಿಂಪಡೆಯಲಾಗಿದೆ.

ಹಿಂದಿನ ಲೇಖನಸಹೋದ್ಯೋಗಿಗಳು ಸಿಡಿಸಿದ ಗುಂಡಿನಿಂದ ಇಬ್ಬರು ಯೋಧರು ಮೃತ, ಇಬ್ಬರಿಗೆ ಗಾಯ
ಮುಂದಿನ ಲೇಖನಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ