ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಶಾಲಾ-ಕಾಲೇಜು, ದೇವಸ್ಥಾನಗಳ ಆವರಣಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್’ಗೆ ನಿಷೇಧ ಮಾಡಲಾಗಿದ್ದು, ಒಂದು ವೇಳೆ ಬಳಕೆ ಮಾಡಿದ್ದೇ ಆದರೆ, ದಂಡ ಹಾಗೂ ಶಿಕ್ಷೆ ವಿಧಿಸಲಾಗುವುದು ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.
ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳು-2016ಗಳು ಮತ್ತು ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಆದೇಶ ಹೊರಡಿಸಲಾಗಿದ್ದು, ಯಾವ ರೀತಿ ಕ್ರಮ ಕೈಗೊಳ್ಳಬೇಕೆಂಬುದನ್ನೂ ಸೂಚಿಸಲಾಗಿದೆ.
ಸೂಕ್ತ ನಿರ್ವಹಣಾ ತಂತ್ರಗಳನ್ನು ರೂಪಿಸುವ ಮೂಲಕ ಏಕ-ಬಳಕೆಯ ಪ್ಲಾಸ್ಟಿಕ್ಗಳ ಬಳಕೆಯನ್ನು ನಿಯಂತ್ರಿಸಬೇಕು ಮತ್ತು ಹಂತಹಂತವಾಗಿ ನಿರ್ಮೂಲನೆ ಮಾಡಬೇಕು ಎಂದು ಪಾಲಿಕೆ ಹೇಳಿದೆ.
ನಿಯಮಗಳಲ್ಲಿ ಗುರುತಿಸಲಾದ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಮೇಲೆ ವಿಧಿಸಲಾದ ನಿರ್ದಿಷ್ಟ ನಿಷೇಧಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಏಕಬಳಕೆ ಪ್ಲಾಸ್ಟಿಕ್ ಬದಲಾಗಿ ಬಟ್ಟೆ ಅಥವಾ ಕಾಗದದಿಂದ ತಯಾರಾದ ವಸ್ತುಗಳನ್ನು ಬಳಸಬೇಕು.
ನಿಯಮಗಳನ್ನು ಪಾಲಿಸಲು ವಿಫಲವಾದರೆ ಘನತ್ಯಾಜ್ಯ ನಿರ್ವಹಣಾ ಬೈ-ಲಾ ಪ್ರಕಾರ ದಂಡ ವಿಧಿಸಲಾಗುವುದು. ಪಾಲಿಕೆಯಿಂದ ಹೊರಡಿಸಲಾದ ವಿವಿಧ ಆದೇಶಗಳು ಮತ್ತು ನಿಬಂಧನೆಗಳ ಉಲ್ಲಂಘನೆಯು ದಂಡದ ಷರತ್ತು ಮತ್ತು ಕ್ರಮವನ್ನು ಪರಿಗಣಿಸಿ ಕ್ರಮಕೈಗೊಳ್ಳಲಾಗುತ್ತದೆ.
ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಮತ್ತು ಏಕಬಳಕ ಪ್ಲಾಸ್ಟಿಕ್ ಬಳಸುವ ಪರಂಪರೆಯ ಅಭ್ಯಾಸವನ್ನು ತೊಡೆದುಹಾಕಲು ನಿರಂತರ ಪ್ರಯತ್ನಗಳನ್ನು ಮಾಡಬೇಕು. ವಿದ್ಯಾರ್ಥಿಗಳಲ್ಲಿ ‘ಏಕಬಳಕ ಪ್ಲಾಸ್ಟಿಕ್ ತ್ಯಜಿಸಿ’ ಎಂಬ ವಿಷಯದ ಮೇಲೆ ಸ್ಪರ್ಧೆಗಳನ್ನು ನಿಯಮಿತವಾಗಿ ಆಯೋಜಿಸಬೇಕು ಎಂದು ಬಿಬಿಎಂಪಿ ಘನತ್ಯಾಜ್ಯ ನಿರ್ವಹಣಾ ವಿಭಾಗದ ಜಂಟಿ ನಿರ್ದೇಶಕಿ ಪ್ರತಿಭಾ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.