ಮನೆ ರಾಜ್ಯ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ನಿಷೇಧ: ಡಾ. ಕೆ.ವಿ ರಾಜೇಂದ್ರ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ನಿಷೇಧ: ಡಾ. ಕೆ.ವಿ ರಾಜೇಂದ್ರ

0

ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಗಳ ಬಳಕೆಯನ್ನು  ಮಾಡುವಂತಿಲ್ಲ.  ಬಳಕೆ ಕಂಡು ಬಂದರೆ  ದಂಡ ವಿದಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು  ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು.

Join Our Whatsapp Group

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಟಿ ಅಂಗಡಿಗಳು ಹಾಗೂ ಕಾಫಿ ಶಾಪ್ ಗಳಲ್ಲಿ ಸಿಗರೇಟ್ ಗಳನ್ನು ಬಳಸುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತದೆ. ಟೀ ಅಂಗಡಿ ಮಾಲೀಕ ನಿಗೆ ಈ ಕುರಿತು ಅರಿವು ಮೂಡಿಸಬೇಕು. ಕಾನೂನು ಪಾಲನೆ ಮಾಡದೇ ಇದ್ದರೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಇವರು ತಿಳಿಸಿದರು.

ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಮಹಾನಗರ ಪಾಲಿಕೆಯ ವತಿಯಿಂದ ಅನುಮತಿ ಪಡೆದುಕೊಳ್ಳಬೇಕು. ಸ್ಮೋಕಿಂಗ್ ಬಡ್ಟ್ಸ್ ಗಳನ್ನು ಡಸ್ಟ್ ಬಿನ್ ಗಳಲ್ಲಿಯೇ ಹಾಕಬೇಕು ಸಾರ್ವಜನಿಕ ಸ್ಥಳಗಳಲ್ಲಿ ಹಾಕಬಾರದು. ಸಾರ್ವಜನಿಕ ಸ್ಥಳಗಳಲ್ಲಿ ಹಾಕಿದರೆ ದಂಡ ವಿಧಿಸ ಬೇಕು. ಈ ಸಂಬಂಧ ಪ್ರತಿ ಠಾಣೆ ವ್ಯಾಪ್ತಿಯಲ್ಲಿ ಕನಿಷ್ಟ 10 ಕೇಸ್ ಗಳನ್ನು ದಾಖಲಿಸಬೇಕು ಎಂದರು.

ಶಾಲಾ ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಸೇವನೆಯನ್ನು ಮಾಡುವಂತಿಲ್ಲ. ಶಿಕ್ಷಣ ಇಲಾಖೆಯ ವತಿಯಿಂದ ಪ್ರೌಡ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕು. ತಂಬಾಕು ಮುಕ್ತ ವಲಯ ನಾಮಫಲಕ ಗಳನ್ನು ಅಳವಡಿಸಿ ಹಾಗೂ ಗೋಡೆ ಬರಹಗಳನ್ನು ಬರೆಯಬೇಕು.   ಶಾಲಾ ಕಾಲೇಜುಗಳನ್ನು ತಂಬಾಕು ಮುಕ್ತ ವಲಯಗಳಾಗಿ ಮಾಡಬೇಕು. ಶಾಲಾ ಕಾಲೇಜು ಹಂತದಲ್ಲಿಯೇ ಮಕ್ಕಳು ತಂಬಾಕು ಸೇವನೆ ಮಾಡದಂತೆ ತಡೆದರೆ ಮುಂದೆ ಅವರು ತಂಬಾಕು ಉತ್ಪನ್ನಗಳ ಸೇವನೆಗೆ ಒಳಗಾಗುವುದನ್ನು ತಡೆಯಬಹುದು ಎಂದರು.

ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಅಶಾದ್ ಉರ್ ರೆಹ್ಮಾನ್ ಶರೀಫ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕುಮಾರಸ್ವಾಮಿ, ಜಿಲ್ಲಾ ಸೇವೆಕ್ಷಣಾಧಿಕಾರಿಗಳಾದ ಡಾ. ಮಹದೇವ್ ಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.