ಮನೆ ರಾಜ್ಯ ಬೆಂಗಳೂರು: ರಾಜಭವನಕ್ಕೆ ಬಾಂಬ್​ ಬೆದರಿಕೆ ಕರೆ

ಬೆಂಗಳೂರು: ರಾಜಭವನಕ್ಕೆ ಬಾಂಬ್​ ಬೆದರಿಕೆ ಕರೆ

0

ಬೆಂಗಳೂರು: ಶಾಲೆಗಳಿಗೆ ಬಾಂಬ್ ಬೆದರಿಕೆಯ ಇಮೇಲ್ ರವಾನೆಯಾಗಿದ್ದ ಪ್ರಕರಣ ಇನ್ನು ತನಿಖಾ ಹಂತದಲ್ಲಿರುವಾಗಲೇ ರಾಜಭವನಕ್ಕೆ ಬಾಂಬ್​ ಇಟ್ಟಿರುವುದಾಗಿ ವ್ಯಕ್ತಿಯೊಬ್ಬ ಪೊಲೀಸ್​ ಕಂಟ್ರೋಲ್​ ರೂಂಗೆ ದೂರವಾಣಿ ಕರೆ ಮೂಲಕ ತಿಳಿಸಿದ್ದಾನೆ.

ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂದು ಅಪರಿಚಿತನೊಬ್ಬ ಬೆದರಿಕೆ ಕರೆ ಮಾಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ರಾತ್ರಿ 11.30ರ ಸುಮಾರಿಗೆ ಎನ್ಐಎ ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ಆರೋಪಿ ‘ರಾಜಭವನದಲ್ಲಿ ಬಾಂಬ್ ಇಟ್ಟಿರುವುದಾಗಿ’ ತಿಳಿಸಿದ್ದಾನೆ. ತಕ್ಷಣ ಎನ್ ಐಎ ಕಂಟ್ರೋಲ್ ರೂಂ ಸಿಬ್ಬಂದಿಯು ಬೆಂಗಳೂರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ರವಾನಿಸಿದ್ದಾರೆ.

ಕೂಡಲೇ ಅಲರ್ಟ್ ಆದ ಬೆಂಗಳೂರು ನಗರ ಪೊಲೀಸರು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ಸಮೇತ ಬಂದು ಪರಿಶೀಲನೆ ನಡೆಸಿದ್ದರು. ನಂತರ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಇದೊಂದು ಹುಸಿ ಕರೆ ಎಂಬುದು ಖಚಿತವಾಗಿದೆ.

ಬಳಿಕ ಎನ್ಐಎ ಕಂಟ್ರೋಲ್ ರೂಂ ಸಿಬ್ಬಂದಿಯಿಂದ ನಂಬರ್ ಪಡೆದ ವಿಧಾನಸೌಧ ಠಾಣಾ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.