ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಕಿಡಿಗೇಡಿಗಳು ಇ-ಮೇಲ್ ಮಾಡಿದ್ದಾರೆ. ಕೂಡಲೆ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಸಿ ಬಾಂಬ್ ಬೆದರಿಕೆ ಎಂದು ದೃಢವಾಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತಾಜ್ ವೆಸ್ಟ್ ಎಂಡ್ ಹೊಟೇಲನಲ್ಲಿ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೇಲ್ನಲ್ಲಿ ರಾಜಕಾರಣಿಗಳು, ಕ್ರಿಕೆಟರ್ ಗಳು ಆಗಾಗ ವಾಸ್ತವ್ಯ ಹೂಡುತ್ತಾರೆ.
ಸೈನಿಕ ಶಾಲೆಗೆ ಬಾಂಬ್ ಬೆದರಿಕೆ
ಕಳೆದ ವಾರ ಸೆಪ್ಟೆಂಬರ್ 18 ರಂದು ಅಶೋಕ್ ನಗರದಲ್ಲಿನ ಸೈನಿಕ ಶಾಲೆಗೂ ಕೂಡ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಶಾಲೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಸಂದೇಶ ರವಾನಿಸಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೆ, ಯಾವುದೇ ಬಾಂಬ್ ಪತ್ತೆಯಾಗಿರಲಿಲ್ಲ. ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.