ಬೆಂಗಳೂರು(Bengaluru): ಬೆಂಗಳೂರು ಜಲಮಂಡಳಿ(BWSSB) ವಾಟರ್ ಬಿಲ್’ಗೆ ಸಿಬ್ಬಂದಿಯೇ ಕನ್ನ ಹಾಕಿದ್ದು, ಗ್ರಾಹಕರು ಪಾವತಿಸಿದ್ದ ಹಣವನ್ನು ಜಲಮಂಡಳಿಗೆ ನೀಡದೆ ವಂಚನೆ ಎಸಗಿರುವ ಆರೋಪ ಕೇಳಿ ಬಂದಿದೆ.
ಗ್ರೂಪ್ ಸಿ ಮತ್ತು ಗ್ರೂಪ್ ಡಿ ನೌಕರ ಸೇರಿದಂತೆ ಒಟ್ಟು 9 ಜನರನ್ನ ಬೊಮ್ಮನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ವರದರಾಜು, ಕಿರಣ್ ಕುಮಾರ್, ನಿರ್ಮಲ್ ಕುಮಾರ್, ಚೌಡೇಶ್, ಮಂಜುನಾಥ್, ಮಹದೇವಸ್ವಾಮಿ, ಉಮೇಶ್, ಬಸವರಾಜು ಬಂಧಿತರು.
ಆರೋಪಿಗಳು ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ವಂಚಿಸಿರುವ ಬಗ್ಗೆ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
2018ರಿಂದ 2022ರವರೆಗೆ ಈ ಅಕ್ರಮ ನಡೆದಿರುವ ಬಗ್ಗೆ ಮಾಹಿತಿ ದೊರೆತಿದೆ. ಒಂದೂವರೆ ಕೋಟಿ ರೂ.ಗೂ ಹೆಚ್ಚು ಹಣ ಸಂಗ್ರಹಿಸಿ ಆರೋಪಿಗಳು ವಂಚನೆ ನಡೆಸಿದ್ದಾರೆ ಎನ್ನಲಾಗಿದೆ. 850ಕ್ಕೂ ಅಧಿಕ ಗ್ರಾಹಕರಿಂದ ಬಿಲ್ ಪಡೆದು ಸರ್ಕಾರಕ್ಕೆ ಕಟ್ಟದೇ ವಂಚನೆ ಎಸಗಲಾಗಿದೆ. ಈ ಬಗ್ಗೆ ಕೋಡಿಚಿಕ್ಕನಹಳ್ಳಿ ಉಪವಿಭಾಗದ ಎಇಇ ದೂರು ನೀಡಿದ್ದು, ಬೊಮ್ಮನಹಳ್ಳಿ ಪೊಲೀಸರಿಂದ ತನಿಖೆ ಮುಂದುವರಿದಿದೆ.