ಮನೆ ರಾಜಕೀಯ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ: ಡಿಕೆಶಿ ರಾಜಕಾರಣ ಮಾಡುತ್ತಿದ್ದಾರೆ- ಸಿಎಂ ಬೊಮ್ಮಾಯಿ

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ: ಡಿಕೆಶಿ ರಾಜಕಾರಣ ಮಾಡುತ್ತಿದ್ದಾರೆ- ಸಿಎಂ ಬೊಮ್ಮಾಯಿ

0

ಬೆಂಗಳೂರು: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಕರಾರು ಜನಸಾಮಾನ್ಯರದ್ದಲ್ಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ.ಶಿವಕುಮಾರ್ ಬಳಸುವ ಭಾಷೆ, ನಡೆದುಕೊಂಡ ರೀತಿ ಯಾವುದೇ ಕನ್ನಡಿಗರಿಗೆ ಶೋಭೆ ತರುವಂಥದ್ದಲ್ಲ ಎಂದು ಕಿಡಿಕಾರಿದರು.

ರಾಷ್ಟ್ರೀಯ ಹೆದ್ದಾರಿ ಬರುವ ಮುನ್ನವೂ ಟೋಲ್ ಸಂಗ್ರಹವಾಗುತ್ತದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಬಹಳಷ್ಟು ಸೇವೆಗಳು ಸರ್ವಿಸ್ ರಸ್ತೆಯಲ್ಲಿಯೇ ಇದೆ. ಅಲ್ಲೆಲ್ಲೂ ಟೋಲ್ ಇಲ್ಲ. ವಿನಾ ಕಾರಣ ರಾಜಕಾರಣವಾಗುತ್ತಿದೆ ಎಂದರು.

ಹಿಂದಿನ ಲೇಖನಬಿಡಿಎಯಿಂದ ಈಸ್ಟ್ ಇಂಡಿಯಾ ಕಂಪೆನಿ ಮನಸ್ಥಿತಿ ಪ್ರದರ್ಶನ; ಪ್ರಾಧಿಕಾರಕ್ಕೆ ಹೈಕೋರ್ಟ್ ಛೀಮಾರಿ
ಮುಂದಿನ ಲೇಖನಒಂಟಿಕೊಪ್ಪಲ್ ಪಂಚಾಂಗವೂ ಮೈಸೂರಿನ ಹಿರಿಮೆಯನ್ನು ಹೆಚ್ಚಿಸಿದೆ: ಎನ್ ಎಂ ನವೀನ್ ಕುಮಾರ್