ಮನೆ ಉದ್ಯೋಗ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 7 ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಬೆಂಗಳೂರಿನಲ್ಲಿವೃತ್ತಿ ಜೀವನ ನಡೆಸಬೇಕು ಎಂದುಕೊಂಡಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅಭ್ಯರ್ಥಿಗಳು ಜನವರಿ 20, 2023ಕ್ಕೆ ಮುನ್ನ ಆಫ್’ಲೈನ್ ಮೂಲಕ ಅರ್ಜಿ ಹಾಕಬೇಕು. ತಡಮಾಡದೇ ಈ ಕೂಡಲೇ ಅಪ್ಲೈಮಾಡಿ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ bangaloreuniversity.ac.in ಗೆ ಭೇಟಿ ನೀಡಿ.

ಶೈಕ್ಷಣಿಕ ಅರ್ಹತೆ:

ಬೆಂಗಳೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಮಾಸ್ಟರ್ ಆಫ್ ಲೈಬ್ರರಿ ಸೈನ್ಸ್(M.LISc), ಎಂ.ಫಿಲ್, ಪಿಎಚ್.ಡಿ ಪಡೆದಿರಬೇಕು.

ವಯೋಮಿತಿ:

ಬೆಂಗಳೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನಿಯಮಾವಳಿಗಳ ಪ್ರಕಾರ ಇರಬೇಕು.

ವಯೋಮಿತಿ ಸಡಿಲಿಕೆ:

ಬೆಂಗಳೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಜನವರಿ 20, 2023 ಕ್ಕೆ ಮುನ್ನ ಕಳುಹಿಸಬೇಕು.

ಸಹಾಯಕ ರಿಜಿಸ್ಟ್ರಾರ್

ಸ್ಥಾಪನೆ ವಿಭಾಗ-I

ಆಡಳಿತಾತ್ಮಕ ಬ್ಲಾಕ್

ಬೆಂಗಳೂರು ವಿಶ್ವವಿದ್ಯಾಲಯ

ಜ್ಞಾನ ಭಾರತಿ ಕ್ಯಾಂಪಸ್

ಬೆಂಗಳೂರು-560056

ಅರ್ಜಿ ಇಲ್ಲಿ ಲಭ್ಯವಿದೆ:

07-Assistant-Librarian-Posts-Advt-Details-Application-Form-Bangalore-University

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/01/2023

ಅರ್ಜಿ ಸಲ್ಲಿಸಲು ಕೊನೆ ದಿನ: 20/01/2023

ಈ ಹುದ್ದೆಗಳು ಸಂಪೂರ್ಣ ತಾತ್ಕಾಲಿಕವಾಗಿದ್ದು, 1 ವರ್ಷದ ಅವಧಿಗೆ ನೇಮಿಸಿಕೊಳ್ಳಲಾಗುತ್ತದೆ.