ಢಾಕಾ: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ದೇಶ ತೊರೆದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಪಕ್ಷ ಅವಾಮಿ ಲೀಗ್‌ನ 29 ನಾಯಕರು ಮತ್ತು ಅವರ ಕುಟುಂಬ ಸದಸ್ಯರ ಮೃತದೇಹಗಳು ಪತ್ತೆಯಾಗಿದೆ.
ಈ ಕುರಿತು ದಿ ಢಾಕಾ ಟ್ರಿಬ್ಯೂನ್ ಸುದ್ದಿ ಸಂಸ್ಥೆ ವರದಿ ತಿಳಿಸಿದೆ.
ಹಸೀನಾ ಅವರು ದೇಶ ತೊರೆದ ಬಳಿಕ ಅವಾಮಿ ಲೀಗ್ ನಾಯಕರಿಗೆ ಸೇರಿದ ಮನೆ ಮತ್ತು ವ್ಯಾಪಾರ ಸಂಸ್ಥೆಗಳ ಮೇಲೆ ಪ್ರತಿಭಟನಕಾರರು ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ. ಬಳಿಕ ಅಲ್ಲಿರುವ ವಸ್ತುಗಳನ್ನು ಲೂಟಿ ಮಾಡಿದ್ದಾರೆ.
ಮಾಜಿ ಕೌನ್ಸಿಲರ್ ಮೊಹಮ್ಮದ್ ಶಾ ಆಲಂ ಅವರ ಮೂರು ಅಂತಸ್ತಿನ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಪರಿಣಾಮ ಹದಿ ಹರೆಯದ ಮಕ್ಕಳು ಸೇರಿ 11 ಮಂದಿ ಮೃತಪಟ್ಟಿದ್ದರು ಎಂದು ಮೂಲಗಳು ತಿಳಿಸಿವೆ.