ಮನೆ ಅಪರಾಧ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆಯ ಬಂಧನ

ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆಯ ಬಂಧನ

0

ಮಂಗಳೂರು: ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿದ್ದಾರೆ.

Join Our Whatsapp Group

ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್​ (25)ನನ್ನು ಬಂಧಿಸಲಾಗಿದೆ.

ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ ಲಾಲ್​​​ಗೋಲ್ ಮೂಲಕ ಅಕ್ರಮವಾಗಿ ಭಾರತದೊಳಗೆ ಪ್ರವೇಶಿಸಿದ್ದನು. ಬಳಿಕ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್​ನಿಂದ ಉಡುಪಿಗೆ ಬಂದಿದ್ದನು. ಇಲ್ಲಿಂದ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಕ್ಕ ಗ್ರಾಮದ ರೋಹನ್ ಎಸ್ಟೇಟ್​​ನಲ್ಲಿ ಅನರುಲ್​ ಶೇಖ್​​​ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು.

ಅನರುಲ್​ ಶೇಖ್ ಬಗ್ಗೆ ಖಚಿತ ಮಾಹಿತಿ ಪಡೆದ ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅನರುಲ್ ಶೇಖ್​ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.