ಮನೆ ಉದ್ಯೋಗ ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 15 ಸೀನಿಯರ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಎಂಬಿಎ, ಪಿಜಿಡಿಎಂ, ಸಿಎ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಜನವರಿ 24, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಜನವರಿ 7 ರಿಂದಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಅಸಕ್ತರು ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ವಿದ್ಯಾರ್ಹತೆ:

ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಎ, ಪಿಜಿಡಿಎಂ, ಸಿಎ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು- 40 ವರ್ಷ

SC/ST ಅಭ್ಯರ್ಥಿಗಳು- 5 ವರ್ಷ ವಯೋಮಿತಿ ಸಡಿಲಿಕೆ

OBC ಅಭ್ಯರ್ಥಿಗಳು- 3 ವರ್ಷ ವಯೋಮಿತಿ ಸಡಿಲಿಕೆ

ಅರ್ಜಿ ಶುಲ್ಕ:

ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳು- 600 ರೂ.

SC/ST/PWD/ಮಹಿಳಾ ಅಭ್ಯರ್ಥಿಗಳು- 100 ರೂ.

ಪಾವತಿಸುವ ಬಗೆ- ಆನ್ಲೈನ್

ಉದ್ಯೋಗದ ಸ್ಥಳ:

ಭಾರತದಲ್ಲಿ ಎಲ್ಲಿ ಬೇಕಾದರೂ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಜನವರಿ 7, 2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 24, 2023