ಮನೆ ಕಾನೂನು ಆರ್‌.ಎನ್‌.ನಾಯಕ ಕೊಲೆ ಪ್ರಕರಣ: ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ಆರ್‌.ಎನ್‌.ನಾಯಕ ಕೊಲೆ ಪ್ರಕರಣ: ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

0

ಬೆಳಗಾವಿ: ಉದ್ಯಮಿ ಆರ್.ಎನ್.ನಾಯಕ ಕೊಲೆ ಪ್ರಕರಣದ ಆರೋಪಿಗಳಿಗೆ ಇಂದು ಕೋಕಾ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದ್ದು, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಮಾರ್ಚ್ 30ರಂದು ಪ್ರಕರಣದಲ್ಲಿ 9 ಮಂದಿ ದೋಷಿಗಳು ಎಂದು ನ್ಯಾಯಾಧೀಶ ಸಿ.ಎಂ‌.ಜೋಶಿ ತೀರ್ಪು ಪ್ರಕಟಿಸಿದ್ದರು.

ಘಟನೆ ವಿವರ: 3 ಕೋಟಿ ರೂಪಾಯಿ ಹಫ್ತಾ ನೀಡದಿದ್ದಕ್ಕೆ 2013 ಡಿಸೆಂಬರ್ 21ರಂದು ಅಂಕೋಲಾದಲ್ಲಿ ಆರ್.ಎನ್.ನಾಯಕ್​ ಅವರನ್ನು ಸುಪಾರಿ ನೀಡಿ ಹತ್ಯೆ ಮಾಡಲಾಗಿತ್ತು. ಆರೋಪಿಗಳ ವಿರುದ್ಧ‌ ಪೊಲೀಸರು ಕೋಕಾ ಅಡಿ ಪ್ರಕರಣ ದಾಖಲಿಸಿದ್ದು ತನಿಖೆ ಕೈಗೊಂಡಿದ್ದರು. ಇದು ರಾಜ್ಯದ ಮೊದಲ ಕೋಕಾ ಪ್ರಕರಣವಾಗಿತ್ತು. ಈ ಆರೋಪ ನ್ಯಾಯಾಲಯದಲ್ಲಿ ಸಾಬೀತಾಗಿತ್ತು. ಪ್ರಕರಣದ ಎರಡನೇ ಆರೋಪಿ ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್,‌ ಮೂರನೇ ಆರೋಪಿ ಬೆಂಗಳೂರಿನ ಅಭಿ ಭಂಡಗಾರ,‌ ನಾಲ್ಕನೇ ಆರೋಪಿ ಉಡುಪಿಯ ಗಣೇಶ ಭಜಂತ್ರಿ ಸೇರಿದಂತೆ ಒಂಬತ್ತನೇ ಆರೋಪಿ ಉಡುಪಿ ಮೂಲದ ಬನ್ನಂಜೆ ರಾಜಾಗೆ ಕೋರ್ಟ್​ ಜೀವಾವಧಿ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ.

ಹಿಂದಿನ ಲೇಖನಬೆಲೆ ಏರಿಕೆ ವಿರುದ್ಧ ಹೋರಾಡುವುದಾದರೆ ನಾನು ಕೇಸರಿ ಶಾಲು ಹಾಕಿ ಬರುತ್ತೇನೆ: ಹೆಚ್ ಡಿಕೆ
ಮುಂದಿನ ಲೇಖನತಂದೆ ಸಾವಿನ ನೋವಿನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿನಿ