ಬಂಟ್ವಾಳ: ರಾ.ಹೆ.75ರ ತುಂಬೆ ರಾಮಲಕಟ್ಟೆ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾದ ಘಟನೆ ನಡೆದಿದೆ. ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ.
ಬಸ್ ಬಿ.ಸಿ.ರೋಡು ಭಾಗದಿಂದ ಮಂಗಳೂರಿಗೆ ತೆರಳುತ್ತಿದ್ದು, ಚಾಲಕನ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಘಟನೆಯಿಂದ ಕೆಲ ಹೊತ್ತು ಸಂಚಾರಕ್ಕೆ ತೊಡಕು ಉಂಟಾಗಿದ್ದು, ಬಳಿಕ ಬಸ್ ತೆರವು ಮಾಡಲಾಗಿದೆ.
ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.