ಮನೆ ಸ್ಥಳೀಯ ಬಾನು ಮುಷ್ತಾಖ್‌ರಿಂದ ದಸರಾ ಉದ್ಘಾಟನೆ ಮಾಡಿಸಿ : ತೇಜಸ್ವಿ

ಬಾನು ಮುಷ್ತಾಖ್‌ರಿಂದ ದಸರಾ ಉದ್ಘಾಟನೆ ಮಾಡಿಸಿ : ತೇಜಸ್ವಿ

0

ಮೈಸೂರು : ೨೦೨೫ರ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಬಾನು ಮುಷ್ತಾಕ್ ಅವರಿಂದ ಮಾಡಿಸಬೇಕೆಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕನ್ನಡದ ಪ್ರಮುಖ ಲೇಖಕಿ ಬಾನು ಮುಷ್ತಾಕ್ ಅವರ ಹಾರ್ಟ್ ಲ್ಯಾಂಪ್ ಕೃತಿಗೆ ವಿಶ್ವದ ಮೇರು ಸಾಹಿತ್ಯ ಪ್ರಶಸ್ತಿಯಾದ ೨೦೨೫ನೇ ಸಾಲಿನ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಒಲಿದಿದೆ.

ಇದು ಕನ್ನಡ ಸಾಹಿತ್ಯಕ್ಕೆ ಸಿಕ್ಕ ಅಂತಾರಾಷ್ಟ್ರೀಯ ಗೆಲುವು, ಬಾನು ಮುಷ್ತಾಕ್ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ೨೦೨೫ರ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಬಾನು ಮುಷ್ತಾಕ್ ಅವರಿಂದ ಉದ್ಘಾಟನೆ ಮಾಡಿಸುವ ಮೂಲಕ ಗೌರವ ನೀಡಬೇಕು ಎಂದು ತೇಜಸ್ವಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.