ಮನೆ ಕಾನೂನು ಬಾಣಂತಿ- ಅವಳಿ ಮಕ್ಕಳ ಸಾವು ಪ್ರಕರಣ: ನಾಲ್ವರು ಸಿಬ್ಬಂದಿ ಅಮಾನತು

ಬಾಣಂತಿ- ಅವಳಿ ಮಕ್ಕಳ ಸಾವು ಪ್ರಕರಣ: ನಾಲ್ವರು ಸಿಬ್ಬಂದಿ ಅಮಾನತು

0

ಬೆಂಗಳೂರು(Bengaluru): ತುಮಕೂರಿನಲ್ಲಿ ನಡೆದ ಬಾಣಂತಿ- ಅವಳಿ ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂದಿಸಿದಂತೆ ಆಸ್ಪತ್ರೆಯ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞೆ ಸೇರಿದಂತೆ ನಾಲ್ವರನ್ನು ಅಮಾನತುಗೊಳಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಆರೋಗ್ಯ ಇಲಾಖೆ ಪ್ರಸೂತಿ ತಜ್ಞೆ ಹಾಗೂ ಮೂವರು ಶುಶ್ರೂಶಕರನ್ನು ಅಮಾನತಿನಲ್ಲಿಟ್ಟು ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತಿದೆ. ಇನ್ನು ಮುಂದೆ ಇಂಥ ಅವಘಡಕ್ಕೆ ಕಾರಣವಾಗುವ ವೈದ್ಯ ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಜತೆಗೆ ಎಲ್ಲ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ರವಾನಿಸಲಾಗಿದ್ದು, ತುರ್ತು ಆರೋಗ್ಯ ಸೇವೆ ಸಂದರ್ಭದಲ್ಲಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಸೇರಿದಂತೆ ಯಾವುದೇ ದಾಖಲೆಗಳನ್ನು ಪರಿಶೀಲಿಸುತ್ತಾ ಕುಳಿತುಕೊಳ್ಳಬಾರದು. ಆರೋಗ್ಯ ಸೇವೆ ನೀಡುವಾಗ ರೋಗಿಯ ರಾಷ್ಟ್ರೀಯತೆ, ಜಾತಿ, ವರ್ಗ, ಆರ್ಥಿಕ ಪತಿಸ್ಥಿತಿ ಅವಲೋಕನ ಮುಖ್ಯವಲ್ಲ. ಇನ್ನು ಮುಂದೆ ಇಂಥ ಘಟನೆಗೆ ಕಾರಣರಾಗುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಹಿಂದಿನ ಲೇಖನಮೈಸೂರು ವಸ್ತುಪ್ರದರ್ಶನದಲ್ಲಿ ಪಾರ್ಕಿಂಗ್’ಗೆ ದುಪ್ಪಟ್ಟು ಶುಲ್ಕ ವಸೂಲಿ: ಅಧಿಕಾರಿಗಳ ಜಾಣ ಕುರುಡು
ಮುಂದಿನ ಲೇಖನನ್ಯಾಯಾಲಯ ಸಂಕೀರ್ಣಗಳಲ್ಲಿ ನವೆಂಬರ್ 12ಕ್ಕೆ ರಾಷ್ಟ್ರೀಯ ಲೋಕ ಅದಾಲತ್