ಮನೆ ರಾಜ್ಯ ಬಸವ ವಸತಿ ಯೋಜನೆ; ಫಲಾನುಭವಿಗಳಿಗೆ ಸಹಾಯಧನ ನೀಡಲು ಸರ್ಕಾರ ಚಿಂತನೆ

ಬಸವ ವಸತಿ ಯೋಜನೆ; ಫಲಾನುಭವಿಗಳಿಗೆ ಸಹಾಯಧನ ನೀಡಲು ಸರ್ಕಾರ ಚಿಂತನೆ

0

ಬೆಳಗಾವಿ : ಬಸವ ವಸತಿ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗೆ ಸಹಾಯ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಜಮೀರ್ ಅಹಮದ್ ತಿಳಿಸಿದರು. ಬಸವ ವಸತಿ ಯೋಜನೆಗೆ ಈಗ ನೀಡುತ್ತಿರುವ ಸಹಾಯಧನವು ಯಾವುದಕ್ಕೂ ಸಾಕಾಗುತ್ತಿಲ್ಲ ಎನ್ನುವ ದೂರುಗಳು ಕೇಳಿ ಬರುತ್ತಲೇ ಇವೆ. ಇದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗಾದರೂ ಸಹಾಯಧನ ಕೊಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರದೀಪ್ ಶೆಟ್ಟರ್ ಪ್ರಶ್ನೆಗೆ ಉತ್ತರಿಸಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಾಣ ಮಾಡಲು ಬೇಕಾಗುವ ಕಚ್ಚಾ ವಸ್ತುಗಳ ಬೆಲೆ ದುಬಾರಿಯಾಗಿದೆ. ಆದ್ದರಿಂದ ವಿವಿಧ ವಸತಿ ಯೋಜನೆಗಳಡಿ ಫಲಾನುಭವಿಗಳಿಗೆ ಈಗ ನೀಡಲಾಗುತ್ತಿರುವ ಸಹಾಯಧನ ಹೆಚ್ಚಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿರುತ್ತದೆ. ಈ ಸಹಾಯಧನ ಹೆಚ್ಚಳ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಈ ಬಗ್ಗೆ ಬರುವ ಬಜೆಟ್‍ನಲ್ಲಿ ಪರಿಗಣಿಸುವ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ಪ್ರಸ್ತುತ ಕೇಂದ್ರ ಸರ್ಕಾರದ ವಸತಿ ಯೋಜನೆಗಳನ್ನು ಹೊರತುಪಡಿಸಿ ಉಳಿದ ಯಾವುದೇ ವಸತಿ ಯೋಜನೆಗಳಡಿ ಅನುದಾನ ಬಿಡುಗಡೆ ಮಾಡಲು ಬಾಕಿ ಇರುವುದಿಲ್ಲ. 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಡಿ ಅಕ್ಟೋಬರ್ – 2025ರ ಅಂತ್ಯಕ್ಕೆ 1324.26 ರೂ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.