ಮನೆ ರಾಜಕೀಯ ಬಸವಣ್ಣನವರ ಕಾಯಕ, ದಾಸೋಹ ನಮಗೆ ಪ್ರೇರಣೆ: ಪ್ರಧಾನಿ ಮೋದಿ

ಬಸವಣ್ಣನವರ ಕಾಯಕ, ದಾಸೋಹ ನಮಗೆ ಪ್ರೇರಣೆ: ಪ್ರಧಾನಿ ಮೋದಿ

0

ವಿಜಯಪುರ: ಸಬ್​ ಕಾ ಸಾತ್ ಸಬ್​ ಕಾ ವಿಕಾಸ್​’ಗೆ ಭಗವಾನ್ ಬಸವಣ್ಣನವರೂ ಸ್ಫೂರ್ತಿಯಾಗಿದ್ದು, ಕಾಯಕ, ದಾಸೋಹ ನಮಗೆ ಪ್ರೇರಣೆಯಾಗಿದೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ.

Join Our Whatsapp Group

ಶನಿವಾರ ವಿಜಯಪುರದ ಸೈನಿಕ ಶಾಲೆ ಆವರಣದಲ್ಲಿ ಆಯೋಜಿಸಲಾಗಿರುವ ಬಿಜೆಪಿ ಸಮಾವೇಶದಲ್ಲಿ ಮಾತನಾಡಿರುವ ಅವರು, ಪಂಚನದಿಗಳ‌ ನಾಡು ವಿಜಯಪುರ ಜನತೆಗೆ ನಮಸ್ಕಾರಗಳು ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದರು.

ಜಗಜ್ಯೋತಿ ಬಸವೇಶ್ವರರ ಜನ್ಮಭೂಮಿಗೆ ಬಂದಿದ್ದೇನೆ. ಬಸವೇಶ್ವರ ಹಾದಿಯಲ್ಲಿ ನಾವು ನಡೆಯುತ್ತೇವೆಂದು  ತಿಳಿಸಿದರು.

ಇಷ್ಟು ದೊಡ್ಡ ಸಂಖ್ಯೆಯಲ್ಲಿ ನನಗೆ ಆಶೀರ್ವಾದ ಮಾಡಲು ಬಂದಿದ್ದೀರಿ. ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂದು ಕನ್ನಡದಲ್ಲೇ ಹೇಳಿದರು.

ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಾಗಿದೆ. ಕಾಯಕ ಮತ್ತು ದಾಸೋಹದ ಪ್ರೇರಣೆ ನಮ್ಮ ಅಭಿವೃದ್ಧಿ ಯೋಜನೆಗಳ ಹಿಂದಿದೆ. ಆದಿವಾಸಿ, ಮಹಿಳೆಯರು, ದಲಿತರು ಸೇರಿದಂತೆ ಎಲ್ಲ ವರ್ಷಗಗಳ ಅಭಿವೃದ್ಧಿಗೆ ಬದ್ಧರಾಗಿದ್ದೇವೆ. ಅನ್ನ, ಆಶ್ರಯ್, ಅಕ್ಷರಕ್ಕಾಗಿ ಡಬಲ್ ಎಂಜಿನ್ ಸರ್ಕಾರ ಕೆಲಸ ಮಾಡಿದೆ ಎಂದು ತಿಳಿಸಿದರು.

ಸಾವಿರಾರು ಕುಟುಂಬಗಳಿಗೆ ನಮ್ಮ ಸರ್ಕಾರ ಭೂಮಿ ಹಕ್ಕುಪತ್ರ ವಿತರಣೆ ಮಾಡಿದೆ. ವಂಚಿತರಿಗೆ ಸರ್ಕಾರದ ಸೌಲಭ್ಯ ತಲುಪಿಸುವುದು ನಮ್ಮ ಗುರಿ. ಸಾಮಾಜಿಕ ನ್ಯಾಯ ಒದಗಿಸಲು ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ಅನೇಕ ಕೆಲಸ ಮಾಡಿದೆ ಎಂದು ಆರೋಪಿಸಿದರು.

ಇಂದು ದೆಹಲಿಯಿಂದ 1 ರೂಪಾಯಿ ಬಿಡುಗಡೆಯಾದರೆ ನೂರಕ್ಕೆ ನೂರರಷ್ಟು ಫಲಾನುಭವಿಗಳಿಗೆ ತಲುಪುತ್ತಿದೆ. ಬಿಜೆಪಿ ಸರ್ಕಾರ ರೈತರ ಖಾತೆಗೆ ಹಣ ನೇರ ಜಮೆ ಮಾಡಿದೆ. ಮಧ್ಯವರ್ತಿಗಳಿಲ್ಲದೇ ರೈತರ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡಿದೆ, ಮಾಡುತ್ತಿದೆ. ಡಬಲ್​ ಇಂಜಿನ್​ ಸರ್ಕಾರದಿಂದ ಕರ್ನಾಟಕ ಅಭಿವೃದ್ಧಿಯಾಗುತ್ತಿದೆ. ಕರ್ನಾಟಕದಲ್ಲೂ ಬಡವರಿಗೆ ರೇಷನ್​ ನೀಡುತ್ತಿದ್ದೇವೆ ಎಂದು ಹೇಳಿದರು.

ಬಿಜೆಪಿ ಸರ್ಕಾರವು ಯೋಜನೆಗಳಲ್ಲಿ ಪಾರದರ್ಶಕತೆ ತಂದಿದೆ. ಎಲ್ಲಾ  ಹಣವೂ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗುತ್ತಿದೆ. ಇಡೀ ದೇಶದಲ್ಲಿ ಕಿಸಾನ್ ಸಮ್ಮಾನ್ ನಿಧಿಯ ಹಣ ನೇರವಾಗಿ ರೈತರ ಖಾತೆಗಳಿಗೆ ತಲುಪುತ್ತಿದೆ. ವಿಜಯಪುರದ ರೈತರ ಖಾತೆಗಳಿಗೂ ನೇರ ಹಣ ಜಮೆ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಹಣ ಇಲ್ಲಿವರೆಗೆ ಬರುತ್ತಲೇ ಇರಲಿಲ್ಲ, ಕಾಂಗ್ರೆಸ್ ಯಾವುದೇ ಸಾಲಮನ್ನಾ ಮಾಡಲಿಲ್ಲ. ರೈತರ ಸಾಲಮನ್ನಾ ​ಮಾಡದೇ ತಮ್ಮ ಜೇಬಿಗೆ ಹಣ ಹಾಕಿಕೊಂಡರು. ಆದರೆ, ಬಿಜೆಪಿಯು ರೈತರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.

ಕಳಸಾ ಬಂಡೂರಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಜೆಟ್​​ನಲ್ಲಿ ಅನುದಾನ ನೀಡಿದ್ದೇವೆ. ವಿಜಯಪುರದ ರೈತರಿಗೆ ನೆರವಾಗುವ ಅನೇಕ ಕ್ರಮಗಳನ್ನು ಕೈಗೊಂಡಿದ್ದೇವೆ. ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆಯ ಕೆಲಸ ಆರಂಭವಾಗಿದೆ. ಇದು ಡಬಲ್ ಎಂಜಿನ್ ಸರ್ಕಾರದ ಕಟಿಬದ್ಧತೆಯಾಗಿದೆ. ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿಯೂ ಡಬಲ್ ಎಂಜಿನ್ ಸರ್ಕಾರ ಕ್ರಮ ಕೈಗೊಂಡಿದೆ. ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನಕ್ಕೂ ಮೊದಲು ಕುಡಿಯುವ ನೀರನ್ನು ಎಲ್ಲಿಂದಲೋ ತರಬೇಕಿತ್ತು. ಈಗ ಮನೆ ಮನೆಗೆ ನೀರು ಬರುತ್ತಿದೆ ಎಂದು ತಿಳಿಸಿದರು.

ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ವೋಕಲ್ ಫಾರ್ ಲೋಕಲ್ ಆಗಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕದಲ್ಲಿ ನೇಕಾರ ಸಮ್ಮಾನ್ ಯೋಜನೆ ಜಾರಿಗೆ ತಂದೆವು. ಕೇಂದ್ರ ಸರ್ಕಾರವೂ ಅದಕ್ಕೆ ಬೆಂಬಲ ನೀಡಿದೆ. ವಿಜಯಪುರದಲ್ಲಿ ವಿಮಾನ ನಿಲ್ದಾಣ​ ನಿರ್ಮಾಣ ಮಾಡಿದ್ದೇವೆ. ಜಿಲ್ಲೆಗೆ ಹೊಸ ಕೈಗಾರಿಕೆಗಳು ಬರುತ್ತಿವೆ. ಈ ಬಾರಿ ಹೊಸ ಮುಖಗಳಿಗೆ ಟಿಕೆಟ್ ನೀಡಿದ್ದೇವೆ. ಕರ್ನಾಟಕದ ಭವಿಷ್ಯಕ್ಕಾಗಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ಹಿಂದಿನ ಲೇಖನಅರ್ಧಕ್ಕೆ ಮೊಟಕುಗೊಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ
ಮುಂದಿನ ಲೇಖನರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟ ಕಡಿಮೆಯಾಗಿದ್ದರೆ ಈ ಆಹಾರಗಳನ್ನು ಸೇವಿಸಿ