ಮನೆ ರಾಜ್ಯ ಪೆಟ್ರೋಲ್‌, ಡೀಸೆಲ್‌ ತೆರಿಗೆ ಕಡಿತ ವಿಚಾರ ಆರ್ಥಿಕ ಸ್ಥಿತಿ ಆಧರಿಸಿ ನಿರ್ಧಾರ: ಸಿಎಂ ಬೊಮ್ಮಾಯಿ

ಪೆಟ್ರೋಲ್‌, ಡೀಸೆಲ್‌ ತೆರಿಗೆ ಕಡಿತ ವಿಚಾರ ಆರ್ಥಿಕ ಸ್ಥಿತಿ ಆಧರಿಸಿ ನಿರ್ಧಾರ: ಸಿಎಂ ಬೊಮ್ಮಾಯಿ

0

ಬೆಂಗಳೂರು (Bengaluru)- ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ತೆರಿಗೆಯನ್ನು ಮತ್ತಷ್ಟು ಕಡಿತಗೊಳಿಸುವುದನ್ನು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಆಧರಿಸಿ ನಂತರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ (CM) ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

2021ರ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಅಲ್ಪ ಪ್ರಮಾಣದಲ್ಲಿ ಇಳಿಕೆ ಮಾಡಿತ್ತು. ಆಗ, ರಾಜ್ಯ ಸರ್ಕಾರವೂ ತೆರಿಗೆ ಕಡಿತ ಮಾಡಿತ್ತು. ಈ ವಿಚಾರವನ್ನು ಬುಧವಾರ ನಡೆದ ವಿಡಿಯೋ ಕಾನ್ಫರೆನ್ಸಿಂಗ್‌ನಲ್ಲಿ ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ, ‘ಕರ್ನಾಟಕದ ನಡೆಯನ್ನು ಇತರ ರಾಜ್ಯಗಳೂ ಅನುಸರಿಸಬೇಕು’ ಎಂದು ಸಲಹೆ ನೀಡಿದ್ದರು.

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡುವ ವೇಳೆ ಪುನಃ ಕರ್ನಾಟಕದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ತೆರಿಗೆ ಕಡಿತ ಮಾಡಲಾಗುವುದೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಯೋಚಿಸುತ್ತೇವೆ. ಈ ವಿಚಾರದಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕವೇ ನಾವು ಮುಂದಿನ ಹೆಜ್ಜೆ ಇಡಬೇಕಾಗುತ್ತದೆ’ ಎಂದರು.

ಕರ್ನಾಟಕದಲ್ಲಿ ನವೆಂಬರ್‌ನಲ್ಲಿ ಕೈಗೊಂಡಿದ್ದ ನಿರ್ಧಾರದಂತೆ ಎಲ್ಲ ರಾಜ್ಯಗಳೂ ತೆರಿಗೆ ಕಡಿತ ಮಾಡಿದರೆ ಜನರಿಗೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯವನ್ನು ಪ್ರಧಾನಿ ಸಭೆಯಲ್ಲಿ ವ್ಯಕ್ತಪಡಿಸಿದರು ಎಂದು ಹೇಳಿದರು.