Saval TV on YouTube
ಬೆಂಗಳೂರು(Bengaluru): ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿಯನ್ನು ದುರ್ಬಳಕೆ ಮಾಡಿಕೊಂಡಿರುವುದಾಗಿ ಕಾಂಗ್ರೆಸ್ ನಾಯಕರು ಆರೋಪ ಮಾಡಿದ ಬೆನ್ನಲ್ಲೆ ಎಚ್ಚೆತ್ತ ಬಿಬಿಎಂಪಿ ವೋಟರ್ ಐಡಿ ನವೀಕರಣ ಮಾಡಿದ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ.
ವೋಟರ್ ಐಡಿ ನವೀಕರಣ ಮಾಡಿದ ಚಿಲುಮೆ ಸಂಸ್ಥೆಗೆ ನೋಟಿಸ್ ನೀಡಿ, ವೈಯಕ್ತಿಕ ಮಾಹಿತಿ ಸೋರಿಕೆ ಆರೋಪ ಕುರಿತು ಉತ್ತರಿಸುವಂತೆ ಸೂಚನೆ ನೀಡಿದೆ.
ಮತದಾರರ ವೈಯಕ್ತಿಕ ಮಾಹಿತಿ ಸಂಗ್ರಹ ಮಾಡಲಾಗಿದೆಯಾ..? ಯಾರ ಅನುಮತಿ ಮೇರೆಗೆ ಮಾಹಿತಿ ಸಂಗ್ರಹ ಮಾಡಲಾಗಿದೆ. ಈ ಬಗ್ಗೆ ಉತ್ತರ ನೀಡುವಂತೆ ನೋಟಿಸ್ ನಲ್ಲಿ ತಿಳಿಸಿಲಾಗಿದೆ.














