ಮನೆ ಸುದ್ದಿ ಜಾಲ ಚಾಂಪಿಯನ್‌ ಭಾರತ ತಂಡಕ್ಕೆ ಬಿಸಿಸಿಐನಿಂದ 21 ಕೋಟಿ ಗಿಫ್ಟ್‌…!

ಚಾಂಪಿಯನ್‌ ಭಾರತ ತಂಡಕ್ಕೆ ಬಿಸಿಸಿಐನಿಂದ 21 ಕೋಟಿ ಗಿಫ್ಟ್‌…!

0

ದುಬೈ : ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಏಷ್ಯಾ ಕಪ್ ಗೆದ್ದ ಭಾರತ ತಂಡದ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗೆ ಬಿಸಿಸಿಐ ಬರೋಬ್ಬರಿ 21 ಕೋಟಿ ನಗದು ಬಹುಮಾನ ಘೋಷಿಸಿದೆ.

ಇದಲ್ಲದೇ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ನಿಂದ ಚಾಂಪಿಯನ್‌ ತಂಡಕ್ಕೆ 2.6 ಕೋಟಿ ರೂ. ಟೂರ್ನಿಯ ಬಹುಮಾನ ಸಿಕ್ಕಿದೆ. ರನ್ನರ್‌ ಅಪ್‌ ಪಾಕಿಸ್ತಾನ ತಂಡ ಕೇವಲ 1.3 ಕೋಟಿ ರೂ. ಬಹುಮಾನ ಪಡೆದುಕೊಂಡಿದೆ.

ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಗೆದ್ದರೂ, ಏಷ್ಯಾ ಕಪ್‌ ಟ್ರೋಫಿ ತಂಡದ ಕೈ ಸೇರಿಲ್ಲ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮತ್ತು ಪಾಕಿಸ್ತಾನದ ಸಚಿವ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ಇಂಡಿಯಾ ತಂಡ ನಿರಾಕರಿಸಿದ ಕಾರಣ ವಿಜೇತ ತಂಡಕ್ಕೆ ಟ್ರೋಫಿಯನ್ನು ನೀಡದ ವಿಚಿತ್ರ ಘಟನೆ ನಡೆಯಿತು.

ತಡರಾತ್ರಿ ನಡೆದ ಈ ನಾಟಕೀಯ ಬೆಳವಣಿಗೆಯಿಂದಾಗಿ, ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತೀಯ ತಂಡವು ಟ್ರೋಫಿ ಇಲ್ಲದೆಯೇ ತಮ್ಮ ವಿಜಯ ಆಚರಿಸಬೇಕಾಯಿತು.