ಶಿವಮೊಗ್ಗ: ಬೆಳ್ಳಂಬೆಳಗ್ಗೆ ವಾಕಿಂಗ್ ಹೋಗುವವರ ಮೇಲೆ ಕರಡಿ ದಾಳಿ ನಡೆಸಿದ ಘಟನೆ ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.
ಘಟನೆಯಲ್ಲಿ ತುಕಾರಂ ಶೆಟ್ಟಿ ಎಂಬುವವರ ಹೊಟ್ಟೆಯ ಭಾಗಕ್ಕೆ ತರಚಿದ ಗಾಯಗಳಾಗಿವೆ.
ಸೋಮವಾರ ಬೆಳಗ್ಗೆ ತುಕಾರಾಂ ಶೆಟ್ಟಿ ಅವರು ವಾಕಿಂಗ್ ಹೋದ ವೇಳೆ ಕರಡಿಯನ್ನು ಬೀದಿ ನಾಯಿಗಳು ಅಟ್ಟಿಸಿಕೊಂಡು ಬಂದಿವೆ ಈ ವೇಳೆ ನಾಯಿಗಳಿಂದ ತಪ್ಪಿಸಿಕೊಳ್ಳಲು ಓಡಿ ಬಂದ ಕರಡಿ ತುಕಾರಾಂ ಅವರ ಮೇಲೆ ದಾಳಿ ನಡೆಸಿ ಪರಾರಿಯಾಗಿದೆ.
ಘಟನೆ ನಡೆದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದು ಅರಣ್ಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಬಂದು ಕರಡಿ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಗೋಪಾಲಗೌಡ ಬಡಾವಣೆಯ ಎಫ್ ಬ್ಲಾಕ್ನಲ್ಲಿರವ ಡಿವಿಜಿ ಪಾರ್ಕ್ ಸಮೀಪ ಕರಡಿ ಪ್ರತ್ಯಕ್ಷವಾಗಿದ್ದು ಇದೀಗ ಅಲ್ಲಿನ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.